ಕರ್ನಾಟಕ

karnataka

ETV Bharat / jagte-raho

ಪರೀಕ್ಷೆಗೆ ಓದುತ್ತ ಕುಳಿತಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ - ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ

ಪರೀಕ್ಷೆಯೆಂದು ಮನೆ ಅಂಗಳದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ನಿರ್ಜನ ಸ್ಥಳಕ್ಕೆ ಹೊತ್ತೊಯ್ದು ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Rape attempt on SSLC student
ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ

By

Published : Jun 27, 2020, 12:04 PM IST

ಕಲಬುರಗಿ:ಎಸ್ಎಸ್ಎಲ್​​ಸಿ ಪರೀಕ್ಷೆ ಹಿನ್ನೆಲೆಯಲ್ಲಿ ತಡರಾತ್ರಿ ವರೆಗೂ ಮನೆ ಅಂಗಳದಲ್ಲಿ ಓದುತ್ತ ಕುಳಿತಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ರಟಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಮಲಾಪುರ ತಾಲೂಕಿನ ಹೊನಬಟ್ಟಿ ತಾಂಡಾದಲ್ಲಿ ಜೂನ್ 24ರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಲಾಕ್​​ಡೌನ್ ಕಾರಣ ಮುಂಬೈನಿಂದ ಗ್ರಾಮಕ್ಕೆ ಮರಳಿ ಬಂದ ರಾಮ ಚವ್ಹಾಣ್​ ಎಂಬ ವಿವಾಹಿತ ಕೃತ್ಯವೆಸಗಿದ್ದಾನೆ.

ಘಟನೆ ಹಿನ್ನೆಲೆ:

ಪರೀಕ್ಷೆಯೆಂದು ಮನೆ ಅಂಗಳದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯ ಬಾಯಿ ಮುಚ್ಚಿದ ಆರೋಪಿಯು ಪಕ್ಕದ ನಿರ್ಜನ ಸ್ಥಳಕ್ಕೆ ಹೊತ್ತೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿ ಕೂಗಿಕೊಂಡಾಗ ನೆರೆಹೊರೆಯವರು ಬಂದು ರಕ್ಷಣೆ ಮಾಡಿದ್ದಾರೆ.

ಜೂ.24 ರ ರಾತ್ರಿಯೇ ಪೊಲೀಸರಿಗೆ ದೂರು ನೀಡಲಾಗಿದ್ದು, ಜೂ. 25 ರಂದು ಮೊದಲ ಪರೀಕ್ಷೆಗೆ ವಿದ್ಯಾರ್ಥಿನಿ ಹಾಜರಾಗಿದ್ದಾಳೆ. ಈ ಸಂಬಂಧ ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ABOUT THE AUTHOR

...view details