ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಪ್ರಕರಣ: ತಂದೆಗೆ ಜೀವಾವಧಿ ಶಿಕ್ಷೆ - ಕಾನೂನು ಸೇವಾ ಪ್ರಾಧಿಕಾರದ ಮೂಲಕವೂ ಸರಕಾರದಿಂದ ಪರಿಹಾರ
ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರಿನ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಮಂಗಳೂರು:ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರಿನ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಉತ್ತರ ಭಾರತ ಮೂಲದ ಪ್ರಸ್ತುತ ದ.ಕ ಜಿಲ್ಲೆಯಲ್ಲಿ ನೆಲೆಸಿರುವ ಕಿಶೋರ್ (36) ಶಿಕ್ಷೆಗೊಳಗಾದ ಅಪರಾಧಿ. ಐಪಿಸಿ 376 (ಅತ್ಯಾಚಾರ) ಅನ್ವಯ ಜೀವಾವಧಿ ಶಿಕ್ಷೆ ಮತ್ತು 5,000 ರೂ. ದಂಡ ವಿಧಿಸಲಾಗಿದೆ. ದಂಡದ ಮೊತ್ತದಲ್ಲಿ 3,000 ರೂ.ಗಳನ್ನು ಸಂತ್ರಸ್ತ ಬಾಲಕಿಗೆ ಹಾಗೂ 2,000 ರೂ. ಸರ್ಕಾರಕ್ಕೆ ಪಾವತಿಸಬೇಕು. ಸಂತ್ರಸ್ತ ಬಾಲಕಿಯು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕವೂ ಸರ್ಕಾರದಿಂದ ಪರಿಹಾರ ಪಡೆಯಬಹುದು ಎಂದು ನ್ಯಾಯಾಧೀಶರು ತೀರ್ಪಿನಲ್ಲಿ ತಿಳಿಸಿದ್ದಾರೆ.
2016ರಲ್ಲಿ ಆರೋಪಿ ಕಿಶೋರ್ ತನ್ನ ಹೆಂಡತಿ ಹೆರಿಗೆಗೆಂದು ಅಸ್ಪತ್ರೆಯಲ್ಲಿ ದಾಖಲಾದ ಸಂದರ್ಭ 13 ವರ್ಷದ ತನ್ನ ಮಗಳನ್ನು ಪುಸಲಾಯಿಸಿ ಆಕೆಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರವೆಸಗಿದ್ದ. ಆರೋಪಿಯ ಕೃತ್ಯಕ್ಕೆ ಬಾಲಕಿ ಹೆದರಿ ಸುಮ್ಮನಾಗಿದ್ದನ್ನು ಗಮನಿಸಿದ ಆರೋಪಿ ಬಳಿಕ ಆಕೆಯ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದ. ಅಲ್ಲದೆ ಕೆಲವು ದಿನಗಳ ಬಳಿಕ ಆಕೆ ಹೆಣ್ಣುಮಗುವಿಗೆ ಜನ್ಮ ನೀಡಿದ್ದಳು. ಆರೋಪಿಯ ವಿರುದ್ಧ ಬಾಲಕಿಯ ತಾಯಿ ನಗರದ ಮಹಿಳಾ ಠಾಣೆಗೆ ದೂರು ನೀಡಿದ್ದರು. ಅದರಂತೆ ಇನ್ಸ್ಪೆಕ್ಟರ್ ಕಲಾವತಿ ಆರೋಪಿಯನ್ನು ಬಂಧಿಸಿ ಸಮಗ್ರ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಮಗುವನ್ನು ಡಿಎನ್‌ಎ ಪರೀಕ್ಷೆಗೊಳಪಡಿಸಿದಾಗ ಕಿಶೋರ್ ಮೇಲಿದ್ದ ಆರೋಪ ಸಾಬೀತಾಗಿತ್ತು.