ಬೆಳಗಾವಿ:ಯುವಕನೋರ್ವ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬೆಳಗಾವಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.
ಬೆಳಗಾವಿ: ಅಪ್ರಾಪ್ತೆ ಮೇಲೆ ಯುವಕನಿಂದ ಅತ್ಯಾಚಾರ, ಆರೋಪಿಗಾಗಿ ಶೋಧ - ಪೋಕ್ಸೊ ಕಾಯ್ದೆಯಡಿ ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ
ಯುವಕನೋರ್ವ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬೆಳಗಾವಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.

ಆಟವಾಡಿಸಲು ಕರೆದುಕೊಂಡು ಹೋಗಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
ನಿನ್ನೆ ಸಂಜೆ ಬಾಲಕಿಯನ್ನು ಆಟವಾಡಿಸಲೆಂದು ಕರೆದುಕೊಂಡು ಹೋದ ಯುವಕ ಸುನೀಲ ಬಾಳನಾಯಿಕ (26) ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಘಟನೆ ಬಳಿಕ ಸುನೀಲ ಪರಾರಿಯಾಗಿದ್ದು, ಪೊಲೀಸರು ಆರೋಪಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ. ಪೋಕ್ಸೊ ಕಾಯ್ದೆಯಡಿ ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.