ನವದೆಹಲಿ: ಜನವರಿ 26 ರಂದು ನಡೆದ ಕೆಂಪು ಕೋಟೆ ಹಿಂಸಾಚಾರ ಪ್ರಕರಣ ಸಂಬಂಧ ತಲೆಮರೆಸಿಕೊಂಡಿದ್ದ ಪಂಜಾಬಿ ನಟ ದೀಪ್ ಸಿಧು ಅವರನ್ನು ದೆಹಲಿ ವಿಶೇಷ ಪೊಲೀಸ್ ಘಟಕ ಬಂಧಿಸಿದೆ.
ಕೆಂಪು ಕೋಟೆ ಹಿಂಸಾಚಾರ ಪ್ರಕರಣ: ನಟ ದೀಪ್ ಸಿಧು ಅರೆಸ್ಟ್
09:15 February 09
14 ದಿನಗಳಿಂದ ತಲೆಮರೆಸಿಕೊಂಡಿದ್ದ ನಟ ದೀಪ್ ಸಿಧು ಅವರನ್ನು ಬಂಧಿಸುವಲ್ಲಿ ದೆಹಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಗಣರಾಜ್ಯೋತ್ಸವ ದಿನದಂದು ರೈತರು ಟ್ರ್ಯಾಕ್ಟರ್ ರ‍್ಯಾಲಿ ನಡೆಸುತ್ತಿದ್ದ ವೇಳೆ ಫೇಸ್‌ಬುಕ್‌ನಲ್ಲಿ ಲೈವ್ ಬಂದು ಕೆಂಪು ಕೋಟೆ ಮೇಲೆ ಧ್ವಜ ಹಾರಿಸಲು ಪ್ರೇರೇಪಿಸಿದ್ದ ಆರೋಪ ದೀಪ್ ಸಿಧು ಮೇಲಿತ್ತು. ಕಳೆದ 14 ದಿನಗಳಿಂದ ನಟ ತಲೆಮರೆಸಿಕೊಂಡಿದ್ದು, ಇವರ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ.ಗಳ ನಗದು ಬಹುಮಾನ ನೀಡುವುದಾಗಿ ದೆಹಲಿ ಪೊಲೀಸರು ಘೋಷಿಸಿದ್ದರು.
ಇದನ್ನೂ ಓದಿ:ವಿವಾಹೇತರ ಸಂಬಂಧ ಆರೋಪ: ವ್ಯಕ್ತಿಯನ್ನು ಥಳಿಸಿ ಕೊಂದ ಗ್ರಾಮಸ್ಥರು
ಜ.26ರಂದು ನಡೆದಿದ್ದ ಟ್ರ್ಯಾಕ್ಟರ್ ರ‍್ಯಾಲಿ ಹಿಂಸಾತ್ಮಕ ರೂಪ ಪಡೆದಿತ್ತು. ಕೆಂಪುಕೋಟೆಗೆ ಮುತ್ತಿಗೆ ಹಾಕಿದ್ದ ಪ್ರತಿಭಟನಾನಿರತ ರೈತರು, ಕೋಟೆ ಮೇಲೆ ಧ್ವಜ ಹಾರಿಸಿದ್ದರು. ಪರಿಸ್ಥಿತಿ ನಿಯಂತ್ರಿಸುತ್ತಿದ್ದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದರು. ಈ ಹಿಂಸಾಚಾರದಲ್ಲಿ ಸುಮಾರು 394 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ಪ್ರಕರಣ ಸಂಬಂಧ ಈವರೆಗೆ ಅನೇಕರ ಮೇಲೆ ಎಫ್ಐಆರ್ ದಾಖಲಿಸಿ, ಬಂಧಿಸಲಾಗಿದೆ.