ತಿರುವನಂತಪುರಂ: ಆಸ್ತಿ ವಿಚಾರಕ್ಕೆ ಜಗಳವಾಗಿ ಪತ್ನಿಯನ್ನು ಕೊಲೆಗೈದ ನಿವೃತ್ತ ಪೊಲೀಸ್ ಅಧಿಕಾರಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೇರಳದಲ್ಲಿ ನಡೆದಿದೆ.
ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ನಿವೃತ್ತ ಪೊಲೀಸ್ ಅಧಿಕಾರಿ - ನಿವೃತ್ತ ಪೊಲೀಸ್ ದಂಪತಿ
ನಿವೃತ್ತ ಪೊಲೀಸ್ ದಂಪತಿಯ ಜಗಳ ಅವರಿಬ್ಬರ ಸಾವಿನಲ್ಲಿ ಅಂತ್ಯವಾಗಿರುವ ಘಟನೆ ಕೇರಳದಲ್ಲಿ ಇಂದು ನಡೆದಿದೆ.
![ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ನಿವೃತ್ತ ಪೊಲೀಸ್ ಅಧಿಕಾರಿ Retired Kerala policeman kills wife](https://etvbharatimages.akamaized.net/etvbharat/prod-images/768-512-7588442-thumbnail-3x2-megha.jpg)
ಮಾಜಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಪೊನ್ನನ್ (68) ತನ್ನ ಪತ್ನಿ ನಿವೃತ್ತ ಹೆಡ್ ಕಾನ್ಸ್ಟೇಬಲ್ ಕೆ.ಲೀಲಾ (72) ಮೇಲೆ ಹಲ್ಲೆ ನಡೆಸಿದ್ದಾರೆ. ವಿಷಯ ತಿಳಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಆ್ಯಂಬುಲೆನ್ಸ್ನೊಂದಿಗೆ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಇತ್ತ ಲೀಲಾರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಂತೆ ಅತ್ತ ಪೊನ್ನನ್ ಮನೆ ಹಿಂದೆ ಇದ್ದ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಗಂಭೀರವಾಗಿ ಗಾಯಗೊಂಡಿದ್ದ ಲೀಲಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ದಂಪತಿ ಎದುರು ಬದುರು ಮನೆಗಳಲ್ಲಿ ಪ್ರತ್ಯೇಕವಾಗಿ ವಾಸವಿದ್ದು, ಆಸ್ತಿ ವಿಚಾರವಾಗಿ ಯಾವಾಗಲೂ ಜಗಳವಾಡುತ್ತಿದ್ದರು ಎಂದು ಸ್ಥಳೀಯರು ಹೇಳಿದ್ದಾರೆ.