ಕಲಬುರಗಿ:ನಿರ್ಮಾಣ ಹಂತದ ಕಟ್ಟಡದಲ್ಲಿ ಏಕಾಏಕಿ ನುಗ್ಗಿದ ದುಷ್ಕರ್ಮಿಗಳು, ರೌಡಿಶೀಟರ್ವೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದ ಘಟನೆ ಕಲಬುರಗಿ ನಗರದ ಆರೀಫ್ ಕಾಲೋನಿಯಲ್ಲಿ ನಡೆದಿದೆ.
ಕಲಬುರಗಿಯಲ್ಲಿ ರೌಡಿಶೀಟರ್ನ ಬರ್ಬರ ಹತ್ಯೆ: ಕೃತ್ಯದ ಬಳಿಕ ದುಷ್ಕರ್ಮಿಗಳು ಪರಾರಿ - Rowdisheater murder in the barn
ಕಲಬುರಗಿಯ ಆರೀಫ್ ಕಾಲೊನಿಯಲ್ಲಿ ರೌಡಿಶೀಟರ್ವೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಕೊಲೆಯಾದ ಸ್ಥಳ
ಕೊಲೆಯಾದ ರೌಡಿಶೀಟರ್ನನ್ನು ಮೊಹಮ್ಮದ್ ಝಾಕೀರ್ ಅಲಿಯಾಸ್ ಮೊಹಮ್ಮದ್ ಸಲೀಮ್ ಎಂದು ಗುರುತಿಸಲಾಗಿದೆ. ರಾಘವೇಂದ್ರನಗರ ಪೊಲೀಸ್ ಠಾಣೆಯಲ್ಲಿ ಮೊಹಮ್ಮದ್ ಝಾಕೀರ್ ವಿರುದ್ಧ ರೌಡಿಶೀಟರ್ ತೆರೆಯಲಾಗಿತ್ತು. ಕೊಲೆಗೆ ಹಳೇ ದ್ವೇಷ ಕಾರಣ ಎಂದು ಶಂಕಿಸಲಾಗಿದೆ. ಈ ಕುರಿತು ರಾಘವೇಂದ್ರನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Apr 18, 2020, 8:13 PM IST