ಮಂಡ್ಯ:ದುಷ್ಕರ್ಮಿಗಳ ತಂಡ ರೌಡಿಶೀಟರ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಸಂತೇಬಾಚಹಳ್ಳಿಯಲ್ಲಿ ನಡೆದಿದೆ.
ಮಂಡ್ಯದಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ರೌಡಿಶೀಟರ್ ಬರ್ಬರ ಕೊಲೆ - ರೌಡಿಶೀಟರ್ ಸೀಮೆಎಣ್ಣೆ ಕುಮಾರ ಕೊಲೆ
ರೌಡಿಶೀಟರ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಕಾರಿನಲ್ಲಿ ಬಂದು ಹಲ್ಲೆ ನಡೆಸಿ ಹನುಮನಹಳ್ಳಿ ಸೀಮೆಎಣ್ಣೆ ಕುಮಾರ್ ಎಂಬಾತನನ್ನು ಕೊಲೆಗೈದು ಪರಾರಿಯಾಗಿದ್ದಾರೆ. ನಾಲ್ಕು ಜನ ಅಪರಿಚಿತ ವ್ಯಕ್ತಿಗಳ ತಂಡ ಕುಮಾರನ ಕುತ್ತಿಗೆ ಮತ್ತು ತಲೆಯ ಭಾಗಕ್ಕೆ ಹಲ್ಲೆ ಮಾಡಿದೆ.
ಸಂತೇಬಾಚಹಳ್ಳಿಯ ಜನನಿಬಿಡ ಪ್ರದೇಶದಲ್ಲಿರುವ ಕನ್ನಿಕ ಮೆಡಿಕಲ್ ಬಳಿ ಕಳೆದ ರಾತ್ರಿ ಈ ಘಟನೆ ನಡೆದಿತ್ತು. ತೀವ್ರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಕುಮಾರ್‌ನನ್ನು ಬೆಳ್ಳೂರಿನ ಆದಿಚುಂಚನಗಿರಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಆತ ಸಾವಿಗೀಡಾಗಿದ್ದಾನೆ. ಘಟನೆ ಕುರಿತು ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.