ಉಜ್ಜೈನಿ (ಮಧ್ಯ ಪ್ರದೇಶ): ವಿಷಯುಕ್ತ ಮದ್ಯ ಸೇವಿಸಿ ಏಳು ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಮಧ್ಯ ಪ್ರದೇಶದ ಉಜ್ಜೈನಿ ಜಿಲ್ಲೆಯ ಛತ್ರಿ ಚೌಕ್‌ನ ಗೋಪಾಲ್ ಮಂದಿರ ಪ್ರದೇಶದಲ್ಲಿ ನಡೆದಿದೆ.
ವಿಷಕಾರಿ ಮದ್ಯ ಸೇವಿಸಿ 7 ಕಾರ್ಮಿಕರು ಸಾವು - ಉಜ್ಜೈನಿ ಕ್ರೈಂ ಸುದ್ದಿ
ಮಧ್ಯ ಪ್ರದೇಶದ ಉಜ್ಜೈನಿಯಲ್ಲಿ ವಿಷಯುಕ್ತ ಮದ್ಯ ಸೇವಿಸಿ ಏಳು ಮಂದಿ ಸಾವನ್ನಪ್ಪಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ.
ವಿಷಕಾರಿ ಮದ್ಯ ಸೇವಿಸಿ 7 ಕಾರ್ಮಿಕರು ಸಾವು
ಇಂದು ಬೆಳಗ್ಗೆ ರಸ್ತೆ ಬದಿ ಬಿದ್ದಿದ್ದ ಕಾರ್ಮಿಕರನ್ನು ನೋಡಿದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ತಕ್ಷಣವೇ ಅವರನ್ನೆಲ್ಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಇವರಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದು, ವರದಿ ಬಂದ ಬಳಿಕ ಪೊಲೀಸರು ತನಿಖೆ ಚುರುಕುಗೊಳಿಸಲಿದ್ದಾರೆ.