ಚಿಕ್ಕಮಗಳೂರು: ತಂದೆಯೇ ಮಗಳ ಮೇಲೆ ಹೀನ ಕೃತ್ಯವೆಸಗಿರುವ ಆರೋಪ ಕೇಳಿಬಂದಿದೆ. ಅಪ್ಪನೇ ಲೈಂಗಿಕ ಕಿರುಕುಳ ನೀಡಿದನೆಂದು ಬೇಸತ್ತ ಯುವತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಜಿಲ್ಲೆಯ ಎನ್ ಆರ್ ಪುರ ತಾಲೂಕಲ್ಲಿ ನಡೆದಿದೆ.
ಕುಡುಕ ತಂದೆಯ ನೀಚ ಕೃತ್ಯ: ಲೈಂಗಿಕ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ - ಮನನೊಂದ ಯುವತಿ ಆತ್ಮಹತ್ಯೆಗೆ ಶರಣು
ಹೆತ್ತ ತಂದೆಯೇ ಮಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ತನ್ನ ತಂದೆಯ ಹೀನ ಕೃತ್ಯದಿಂದ ಮನನೊಂದ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಎನ್. ಆರ್. ಪುರ ತಾಲೂಕಿನ ಬಾಳೆಹೊನ್ನೂರಿನ ಹಲಸೂರು ಗ್ರಾಮದಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ.
ತಂದೆಯಿಂಲೇ ಮಗಳ ಮೇಲೆ ಲೈಂಗಿಕ ಕಿರುಕುಳ ಆರೋಪ, ಮನನೊಂದ ಯುವತಿ ಆತ್ಮಹತ್ಯೆಗೆ ಶರಣು
ಬಾಳೆಹೊನ್ನೂರಿನ ಹಲಸೂರು ಗ್ರಾಮದಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. 19 ವಯಸ್ಸಿನ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 54 ವಯಸ್ಸಿನ ತಂದೆ ಕುಡುಕ ತಂದೆ ಈ ನೀಚ ಕೃತ್ಯವೆಸಗಿರುವ ಆರೋಪಿ. ಈತ ಮಗಳಿಗೆ ನಿತ್ಯ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗ್ತಿದೆ.
ಈ ವಿಚಾರ ತಿಳಿದ ಗ್ರಾಮಸ್ಥರು ಆರೋಪಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪ್ರತಿ ನಿತ್ಯ ಕುಡಿದು ಬಂದು ಮಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದನಂತೆ. ಬಾಳೆಹೊನ್ನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ಬಳಿಕ ತನಿಖೆ ಕೈಗೊಂಡಿದ್ದಾರೆ.