ಶಿವಮೊಗ್ಗ: ಖಾಸಗಿ ಕಂಪನಿಯ ಬಸ್, ಚಾಲಕನ ನಿಯಂತ್ರಣ ತಪ್ಪಿ ಆಕ್ಟಿವಾ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೋರ್ವ ಸವಾರ ಗಾಯಗೊಂಡ ಘಟನೆ ನಗರದಲ್ಲಿ ನಡೆದಿದೆ.
ಬೈಕ್ಗೆ ಬಸ್ ಡಿಕ್ಕಿ: ಯುವತಿ ಸಾವು - ಬಸ್ ಮತ್ತು ಬೈಕ್ ನಡುವೆ ಅಪಘಾತ
ಬೈಕ್ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೋರ್ವ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.
ಬೈಕ್ ಗೆ ಬಸ್ ಡಿಕ್ಕಿ
ಬುದ್ಧ ನಗರದ ನಿವಾಸಿ ಫಾತೀಮಾ (21) ಮೃತಪಟ್ಟ ಯುವತಿ ಎನ್ನಲಾಗಿದೆ. ಇನ್ನೋರ್ವ ಸವಾರ ಇರ್ಫಾನ್ಗೆ ಗಂಭೀರ ಗಾಯಗಳಾಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದಿಂದ ಯುವತಿ ಸಾವನ್ನಪ್ಪಿದ ಸುದ್ದಿ ತಿಳಿಯುತ್ತಿದ್ದಂತೆ ಸಂಬಂಧಿಕರು ಖಾಸಗಿ ಬಸ್ ಕಂಪನಿ ಕಚೇರಿ ಎದುರು ನ್ಯಾಯ ಕೊಡಿಸುವಂತೆ ಪ್ರತಿಭಟನೆ ನಡೆಸಿದರು. ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಸಮಾಧಾನಪಡಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಘಟನೆ ಬಗ್ಗೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.