ಚುರು (ರಾಜಸ್ಥಾನ): ಟ್ರಕ್ ಮತ್ತು ಜೀಪ್ ನಡುವೆ ಡಿಕ್ಕಿಯಾಗಿ ನಾಲ್ವರು ಮಹಿಳೆಯರು ಸೇರಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚುರು ಜಿಲ್ಲೆಯಲ್ಲಿ ನಡೆದಿದೆ.
ಟ್ರಕ್ ಮತ್ತು ಜೀಪ್ ನಡುವೆ ಭೀಕರ ಅಪಘಾತ: 6 ಜನರ ದುರ್ಮರಣ - Rajasthan road accident
![ಟ್ರಕ್ ಮತ್ತು ಜೀಪ್ ನಡುವೆ ಭೀಕರ ಅಪಘಾತ: 6 ಜನರ ದುರ್ಮರಣ churu](https://etvbharatimages.akamaized.net/etvbharat/prod-images/768-512-9792972-thumbnail-3x2-megha.jpg)
14:09 December 07
ದಟ್ಟವಾದ ಮಂಜು ಆವರಿಸಿದ್ದ ಹಿನ್ನೆಲೆ ಟ್ರಕ್ ಮತ್ತು ಜೀಪ್ ನಡುವೆ ಡಿಕ್ಕಿಯಾಗಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಜಸ್ಥಾನದಲ್ಲಿ ಈ ದುರ್ಘಟನೆ ಸಂಭವಿಸಿದೆ.
ದಟ್ಟವಾದ ಮಂಜಿನಿಂದಾಗಿ ಕಳೆದೆರಡು ದಿನಗಳಿಂದ ಚುರು ಜಿಲ್ಲೆಯಲ್ಲಿ ರಸ್ತೆ ಅಪಘಾತಗಳು ನಡೆಯುತ್ತಿವೆ. ಇಂದು ಎಂಟು ಜನರಿದ್ದ ಜೀಪ್ಗೆ ಟೊಮೆಟೊ ತುಂಬಿದ ಟ್ರಕ್ ಗುದ್ದಿದೆ. ಆರು ಜನರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸರದಾರ್ ಶಹರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಅಪಘಾತವಾಗಿ ಗಂಭೀರ ಗಾಯಗೊಂಡು ನರಳಾಡಿದ ವ್ಯಕ್ತಿ : ಸಹಾಯಕ್ಕೆ ಬಾರದ ಜನ
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಬಳಿಕ ಶವಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸುವುದಾಗಿ ತಿಳಿಸಿದ್ದಾರೆ.