ಬೆಳಗಾವಿ: ಕಳೆದ ಮೂರು ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ವಿವಾಹಿತ ಯುವತಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ತಾಲೂಕಿನ ಸುಳಗಾ ಗ್ರಾಮದಲ್ಲಿ ನಡೆದಿದೆ.
ಬೆಳಗಾವಿ: ನವವಿವಾಹಿತೆ ನೇಣಿಗೆ ಶರಣು, ಕಾರಣ ನಿಗೂಢ.. - belagavi sucide news
ಮೃತ ಯುವತಿ ಕಳೆದ ಮೂರು ತಿಂಗಳ ಹಿಂದಷ್ಟೇ ಉಚಗಾಂವ ಮೂಲದ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ನಿಖಿಲ್ ಚೋಪ್ಡೆ ಜೊತೆಗೆ ಅದ್ಧೂರಿಯಾಗಿ ಮದುವೆ ಮಾಡಿಕೊಂಡಿದ್ದಳು..
ತಾಲೂಕಿನ ಸುಳಗಾ ಗ್ರಾಮದ ನಿವಾಸಿ ಜ್ಯೋತಿ ಚೋಪ್ಡೆ (19) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವತಿ. ಮೃತ ಯುವತಿ ಕಳೆದ ಮೂರು ತಿಂಗಳ ಹಿಂದಷ್ಟೇ ಉಚಗಾಂವ ಮೂಲದ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ನಿಖಿಲ್ ಚೋಪ್ಡೆ ಜೊತೆಗೆ ಅದ್ಧೂರಿಯಾಗಿ ಮದುವೆ ಮಾಡಿಕೊಂಡಿದ್ದಳು. ಕಳೆದ ಹಲವು ದಿನಗಳ ಹಿಂದಷ್ಟೇ ತವರು ಮನೆಗೆ ಉಳಿದುಕೊಳ್ಳಲು ಬಂದಿದ್ದಳು. ಆದರೆ, ಇಂದು ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಯುವತಿ ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಕಾಕತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ. ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.