ಪಾಟ್ನಾ:ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ ಸಂಬಂಧ ಬಿಹಾರ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಪ್ರಕರಣದಲ್ಲಿ ತಳುಕು ಹಾಕಿಕೊಂಡಿರುವ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿಯನ್ನು ವಿಚಾರಣೆಗೊಳಪಡಿಸಲು ಪೊಲೀಸರು ಮುಂದಾಗಿದ್ದಾರೆ. ಆದ್ರೆ ಆಕೆ ಇರುವ ಸ್ಥಳವನ್ನು ಪತ್ತೆ ಹಚ್ಚಲು ಪೊಲೀಸರಿಂದ ಸಾಧ್ಯವಾಗಿಲ್ಲ ಎನ್ನಲಾಗುತ್ತಿದೆ.
ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಕೇಸ್; ಪತ್ತೆಯಾಗದ ರಿಯಾ ಚಕ್ರವರ್ತಿ ಇರೋ ಸ್ಥಳ - ರಿಯಾ ಇರುವ ಸ್ಥಳ ಪತ್ತೆ ಹಚ್ಚಲು ಪೊಲೀಸರು ವಿಫಲ
ಪ್ರಕರಣದಲ್ಲಿ ತಳುಕು ಹಾಕಿಕೊಂಡಿರುವ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿಯನ್ನು ವಿಚಾರಣೆಗೊಳಪಡಿಸಲು ಪೊಲೀಸರು ಮುಂದಾಗಿದ್ದಾರೆ. ಆದ್ರೆ ಆಕೆ ಇರುವ ಸ್ಥಳವನ್ನು ಪತ್ತೆ ಹಚ್ಚಲು ಪೊಲೀಸರಿಂದ ಸಾಧ್ಯವಾಗಿಲ್ಲ ಎನ್ನಲಾಗುತ್ತಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಹಾರದ ಡಿಜಿಪಿ ಗುಪ್ತೇಶ್ವರ್ ಪಾಂಡೆ, ಪ್ರಮುಖ ಆರೋಪಿ ರಿಯಾ ಚಕ್ರವರ್ತಿ ಇರುವ ಸ್ಥಳ ತಿಳಿದುಬಂದಿಲ್ಲ. ಲಭ್ಯ ದಾಖಲೆಗಳ ಆಧಾರದ ಮೇಲೆ ಬಿಹಾರದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಗತ್ಯ ಬಿದ್ದರೆ ಹಿರಿಯ ಅಧಿಕಾರಿಗಳನ್ನು ಮುಂಬೈಗೆ ಕಳುಹಿಸುತ್ತೇವೆ ಎಂದಿದ್ದಾರೆ.
ಮುಂಬೈಗೆ ತೆರಳಿರುವ ತಂಡ, ಸುಶಾಂತ್ ಸಿಂಗ್ ಸಹೋದರಿಯ ಹೇಳಿಕೆ ಆಧರಿಸಿ ಸಿಂಗ್ ಮಾಜಿ ಗೆಳತಿ ಅಂಕಿತ ಲೋಕಂಡೆ, ಅಡುಗೆ ಸಿಬ್ಬಂದಿ, ಸ್ನೇಹಿತರು, ಸಹೋದ್ಯೋಗಿಗಳು ಮತ್ತು ಸಂಬಂಧಿಕರಿಂದ ಪ್ರಮುಖ ಮಾಹಿತಿ ಕಲೆ ಹಾಕಲಿದ್ದಾರೆ. ಇದರ ಜೊತೆಗೆ ಬ್ಯಾಂಕ್ ಖಾತೆಗಳು, ವ್ಯವಹಾರದ ಬಗ್ಗೆಯೂ ತನಿಖೆ ನಡೆಸಲಿದ್ದಾರೆ ಎಂದು ಡಿಜಿಪಿ ತಿಳಿಸಿದ್ದಾರೆ.