ನವದೆಹಲಿ: ಕೋವಿಡ್ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ 14 ವರ್ಷದ ಬಾಲಕಿ ಮೇಲೆ ಇನ್ನೋರ್ವ ಸೋಂಕಿತ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ದೆಹಲಿಯ ಛತ್ತರ್ಪುರದಲ್ಲಿ ನಡೆದಿದೆ.
ಕೋವಿಡ್ ಕೇಂದ್ರದಲ್ಲಿ ಕಾಮುಕ: ಸೋಂಕಿತ ಬಾಲಕಿ ಮೇಲೆ ಕೊರೊನಾ ರೋಗಿಯಿಂದ ಲೈಂಗಿಕ ದೌರ್ಜನ್ಯ! - ಕೋವಿಡ್ ಕೇರ್ ಸೆಂಟರ್
ಕೋವಿಡ್ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ 14 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಹಾಗೂ ಘಟನೆಯ ದೃಶ್ಯವನ್ನು ಮೊಬೈಲ್ನಲ್ಲಿ ಸೆರೆಹಿಡಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ.
ಜುಲೈ 15ರ ರಾತ್ರಿ ಬಾಲಕಿ ವಾಶ್ ರೂಂಗೆ ತೆರಳಿದ್ದ ಸಂದರ್ಭ 19 ವರ್ಷದ ಯುವಕ ಈ ದುಷ್ಕೃತ್ಯವೆಸಗಿದ್ದಾನೆ. ಘಟನೆ ಸಂಬಂಧ ಆರೋಪಿ ಸೋಂಕಿತನ ಜೊತೆಯಿದ್ದ ಮತ್ತೊಬ್ಬ ವ್ಯಕ್ತಿಯನ್ನೂ ಪೊಲೀಸರು ಬಂಧಿಸಿದ್ದಾರೆ. ಈತ ಘಟನೆಯ ದೃಶ್ಯವನ್ನು ಮೊಬೈಲ್ನಲ್ಲಿ ಸೆರೆಹಿಡಿದಿದ್ದಾನೆ ಎಂದು ಸಂತ್ರಸ್ತ ಬಾಲಕಿ ದೂರಿನಲ್ಲಿ ವಿವರಿಸಿದ್ದಾಳೆ.
ಕೋವಿಡ್ -19 ಕೇಂದ್ರದಲ್ಲಿ ಮಹಿಳೆ ಮತ್ತು ಪುರುಷರಿಗಾಗಿ ಪ್ರತ್ಯೇಕ ವಾರ್ಡ್‌ಗಳಿವೆ. ಆದರೆ ಇಲ್ಲಿ ನಿಯಮಗಳನ್ನು ಪಾಲಿಸುತ್ತಿಲ್ಲ. ಘಟನೆ ನಡೆದ ವೇಳೆ ಸೆಕ್ಯುರಿಟಿ ಗಾರ್ಡ್‌ಗಳು ಸಹ ಎಚ್ಚರವಾಗಿರಲಿಲ್ಲ. ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಡಿಎಸ್ಪಿ ಪರ್ವಿಂದರ್ ಸಿಂಗ್ ಹೇಳಿದ್ದಾರೆ.