ಬೆಳಗಾವಿ: ನಗರದಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ, ಆತನಿಂದ ನಾಲ್ಕು ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳಗಾವಿ: ಖತರ್ನಾಕ್ ಬೈಕ್ ಕಳ್ಳನ ಬಂಧನ - Two Wheeler thief arrest
ಬೆಳಗಾವಿಯಲ್ಲಿ ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಪೊಲೀಸರು ಬಂಧಿಸಿದ್ದು, 1,95,000 ರೂ. ಮೌಲ್ಯದ ನಾಲ್ಕು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇಲ್ಲಿನ ರುಕ್ಮಿಣಿ ನಗರದ ನಿವಾಸಿ ಚಂದ್ರಮೋಹನ ಹರಿಜನ ಬಂಧಿತ ಆರೋಪಿ. ಈತ ನಗರದ ಬಸ್ ನಿಲ್ದಾಣ ಸೇರಿದಂತೆ ಬಹುತೇಕ ಕಡೆ ಬೈಕ್‌ಗಳನ್ನು ಕದ್ದು ಮಾರುತ್ತಿದ್ದ. ಇತ್ತೀಚಿನ ದಿನಗಳಲ್ಲಿ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಕಳ್ಳತನ ಹಾಗೂ ನಾಪತ್ತೆ ಪ್ರಕರಣಗಳು ಹೆಚ್ಚಾದ ಹಿನ್ನೆಲೆ ಸಿಪಿಐ ಸಂಗಮೇಶ ಶಿವಯೋಗಿ ನೇತೃತ್ವದಲ್ಲಿ ಪೊಲೀಸ್ ಆಯುಕ್ತರು, ಉಪ - ಪೊಲೀಸ್ ಆಯುಕ್ತರು ಹಾಗೂ ಎಸಿಪಿ ಮಾರ್ಗದರ್ಶನದಲ್ಲಿ ತಂಡವನ್ನು ರಚಿಸಿ ಆರೋಪಿಯನ್ನು ಬಂಧಿಸಲಾಗಿದೆ.
ಬಂಧಿತನಿಂದ 1,95,000 ರೂ. ಮೌಲ್ಯದ ನಾಲ್ಕು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಕುರಿತು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.