ತುಮಕೂರು: ಸರ್ಕಾರಿ ಶಾಲಾ ಚಾವಣಿ ಹಾಗೂ ಕಟ್ಟಡದ ಕಂಬ ಕುಸಿದು ಬಿದ್ದಿದ್ದು ಅದೃಷ್ಟವಶಾತ್ ಶಾಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ದೊಡ್ಡ ಪಾಳ್ಯದಲ್ಲಿ ನಡೆದಿದೆ.
ಕುಸಿದು ಬಿದ್ದ ಶಾಲೆಯ ಚಾವಣಿ: ಪ್ರಾಣಾಪಾಯದಿಂದ ವಿದ್ಯಾರ್ಥಿಗಳು ಪಾರು
ಸರ್ಕಾರಿ ಶಾಲಾ ಚಾವಣಿ ಹಾಗೂ ಕಟ್ಟಡದ ಕಂಬ ಕುಸಿದು ಬಿದ್ದಿದ್ದು ಅದೃಷ್ಟವಶಾತ್ ಶಾಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ದೊಡ್ಡ ಪಾಳ್ಯದಲ್ಲಿ ನಡೆದಿದೆ.
ದೊಡ್ಡಪಾಳ್ಯ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಇಂದು ಬೆಳಗ್ಗೆ 10 ಗಂಟೆಗೆ ಈ ಘಟನೆ ನಡೆದಿದ್ದು, ಶಾಲೆಗೆ ಬಂದಂತಹ ಮಕ್ಕಳು ಶಾಲಾ ಆವರಣವನ್ನು ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಛಾವಣಿ ಕುಸಿದು ಬಿದ್ದಿದೆ. ಸಮೀಪದಲ್ಲೇ ಇದ್ದ ಮಕ್ಕಳು ಗಾಬರಿಗೊಂಡು ದೂರ ಓಡಿ ಹೋಗಿದ್ದಾರೆ. ಶಾಲೆಯಲ್ಲಿ 20 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, 2 ಶಾಲಾ ಕೊಠಡಿಗಳಿವೆ.
ಈಗಾಗಲೇ ಹಲವಾರು ಬಾರಿ ಶಾಲಾಕಟ್ಟಡ ಶಿಥಿಲಗೊಂಡಿದ್ದು, ದುರಸ್ತಿ ಪಡಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದರು. ಶಿಕ್ಷಣ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದು ಘಟನೆಗೆ ಕಾರಣವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.