ಬೆಂಗಳೂರು/ರಾಮನಗರ: ಬಾಲಕಿವೋರ್ವಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಕಾಮುಕನಿಗೆ 25 ವರ್ಷಕಾರಾಗೃಹ ಶಿಕ್ಷೆ ವಿಧಿಸಿ ಹೈಕೋರ್ಟ್ ತೀರ್ಪು ನೀಡಿದೆ.
ಬಾಲಕಿ ಮೇಲೆ ಅತ್ಯಾಚಾರ, ಕೊಲೆ: ಕಾಮುಕನಿಗೆ 25 ವರ್ಷ ಕಾರಾಗೃಹ ಶಿಕ್ಷೆ - ರಾಮನಗರ, ಬಾಲಕಿ ಅತ್ಯಾಚಾರ ಕೊಲೆ ಪ್ರಕರಣ, ಆರೋಪಿಯ ಮರದಂಡನೆ ರದ್ದು, 25 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದ ಹೈಕೋರ್ಟ್, ಕನ್ನಡ ವಾರ್ತೆ, ಈ ಟಿವಿ ಭಾರತ
ಬಾಲಕಿಯೊಬ್ಬಳ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಆರೋಪಿಗೆ ಜಿಲ್ಲಾ ನ್ಯಾಯಾಲಯ ವಿಧಿಸಿದ್ದ ಮರಣ ದಂಡನೆ ಶಿಕ್ಷೆಯನ್ನು ರದ್ದುಪಡಿಸಿರುವ ಹೈಕೋರ್ಟ್ 25 ವರ್ಷ ಕಾರಾಗೃಹ ಶಿಕ್ಷೆಯನ್ನು ವಿಧಿಸಿ, ಹೈಕೋರ್ಟ್ ತೀರ್ಪು ನೀಡಿದೆ.
ರಾಮನಗರ ಜಿಲ್ಲೆಯ ತಾವರೆಕೆರೆ ಜನತಾ ಕಾಲೋನಿಯ 5 ವರ್ಷದ ಬಾಲಕಿಯನ್ನು ಬೀಡಿ ತರಲು ಅಂಗಡಿಗೆ ಕಳಿಸಿದ್ದಾಗ ನೆರೆಮನೆಯ ಸಲೀಂ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ. ಹೀಗಾಗಿ ತಾವರೆಕೆರೆ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಪ್ರಕರಣದ ವಿಚಾರಣೆಯನ್ನು ನಡೆಸಿದ್ದ ರಾಮನಗರ 3ನೇ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿ ಆದೇಶಿಸಿತ್ತು.
ಜಿಲ್ಲಾ ಸೆಷನ್ಸ್ ನ್ಯಾಯಾಲಯ ವಿಧಿಸಿದ್ದ ಮರಣದಂಡನೆ ಶಿಕ್ಷೆ ಆದೇಶವನ್ನು ಪ್ರಶ್ನಿಸಿ ಆರೋಪಿ ಸಲೀಂ ಹೈಕೋರ್ಟ್ ಮೆಟ್ಟಿಲೇರಿದ್ದ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಮಳೀಮಠ ಹಾಗೂ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮರಣದಂಡನೆ ರದ್ದುಪಡಿಸಿ, 25 ವರ್ಷ ಕಾರಾಗೃಹ ಶಿಕ್ಷೆಯನ್ನು ವಿಧಿಸಿದೆ.
TAGGED:
KN_BNG_09_HIGCOURT_7204498