ಬೆಂಗಳೂರು:ಹಬ್ಬದ ದಿನಗಳನ್ನೇ ಗುರಿಯಾಗಿಸಿಕೊಂಡು ಮನೆಗಳ್ಳನ ಮಾಡುತ್ತಿದ್ದ ನೇಪಾಳ ಮೂಲದ ವ್ಯಕ್ತಿಯೋರ್ವನನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.
ಕಮಲ್ ಸಿಂಗ್ (28) ಬಂಧಿತ ಆರೋಪಿ.
ಬೆಂಗಳೂರು:ಹಬ್ಬದ ದಿನಗಳನ್ನೇ ಗುರಿಯಾಗಿಸಿಕೊಂಡು ಮನೆಗಳ್ಳನ ಮಾಡುತ್ತಿದ್ದ ನೇಪಾಳ ಮೂಲದ ವ್ಯಕ್ತಿಯೋರ್ವನನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.
ಕಮಲ್ ಸಿಂಗ್ (28) ಬಂಧಿತ ಆರೋಪಿ.
ಈತ ಹಬ್ಬದ ಸಂದರ್ಭಗಳಲ್ಲಿ ತಮ್ಮ ಊರಿಗೆ ತೆರಳುವ ಜನರನ್ನು ಗಮನಿಸಿ ಅವರ ಮನೆ ಕಿಟಿಕಿ ಕಿತ್ತು ಒಳಪ್ರವೇಶಿಸಿ ಕಳ್ಳತನ ಮಾಡುತ್ತಿದ್ದನಂತೆ. ಕಳೆದ 9 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ಈತ, ಹೋಟೆಲ್ನಲ್ಲಿ ಕೆಲಸ ಹಾಗೂ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಆದರೆ ಹೆಚ್ಚು ಹಣ ಗಳಿಸುವ ಉದ್ದೇಶದಿಂದ ಈ ರೀತಿ ಕಳ್ಳತನ ಮಾಡುತ್ತಿದ್ದ ಎಂದು ತನಿಖೆ ವೇಳೆ ಆತ ಬಾಯಿ ಬಿಟ್ಟಿದ್ದಾನೆ.
ಚಿನ್ನಾಭರಣ ಕಳೆದುಕೊಂಡ ಜನರು ಬಾಣಸವಾಡಿ ಠಾಣೆಯಲ್ಲಿ ದೂರು ನೀಡಿದ್ದರು. ಇದರ ಅನ್ವಯ ತನಿಖೆ ಆರಂಭಿಸಿದ ಪೊಲೀಸರು ಕಳ್ಳನನ್ನು ಬಂಧಿಸಿದ್ದಾರೆ. ಸದ್ಯ ಬಂಧಿತನಿಂದ 35 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿಸಿದ್ದಾರೆ.