ಬಂಟ್ವಾಳ: ದ್ವಿಚಕ್ರ ವಾಹನವೊಂದರಲ್ಲಿ ಬಂದ ವ್ಯಕ್ತಿವೋರ್ವ ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮುಡ್ನೂರು ಗ್ರಾಮದ ಮರುವಾಳ ಎಂಬಲ್ಲಿ ನಡೆದಿದೆ.
ಮಹಿಳೆ ಮಾಂಗಲ್ಯ ಸರ ಕಿತ್ತುಕೊಂಡು ಖದೀಮ ಪರಾರಿ: ಪ್ರಕರಣ ದಾಖಲು - Thief escape with gold Chain at bantwal
ಮುಡ್ನೂರು ಗ್ರಾಮದ ಮರುವಾಳ ಎಂಬಲ್ಲಿ ದ್ವಿಚಕ್ರ ವಾಹನವೊಂದರಲ್ಲಿ ಬಂದ ವ್ಯಕ್ತಿವೋರ್ವ ಮಹಿಳೆಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದಾನೆ.
Vitla police station
ಮರುವಾಳ ನಿವಾಸಿ ತೋಮಸ್ ರೆಬೆಲ್ಲೋ ಅವರ ಪತ್ನಿ ಮಿನೆಜಸ್ ಅವರು ಸೆ.22 ರಂದು ಮಧ್ಯಾಹ್ನ ಮನೆಗೆ ಹಿಂದಿರುಗುತ್ತಿದ್ದ ವೇಳೆ ಕುಂಡಡ್ಕ ಭಾಗದಿಂದ ದ್ವಿಚಕ್ರವಾಹನದಲ್ಲಿ ಬಂದ ವ್ಯಕ್ತಿ ಚಿನ್ನದ ಕರಿಮಣಿ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ ಎಂದು ಮಹಿಳೆ ವಿಟ್ಲ ಠಾಣೆಗೆ ದೂರು ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.