ಚಿಕ್ಕಬಳ್ಳಾಪುರ: ಗೌರಿಬಿದನೂರು ಪುರ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ದ್ವಿಚಕ್ರ ವಾಹನ ಕಳ್ಳರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿರುವ ಘಟನೆ ಜಿಲ್ಲೆಯ ಗೌರಿಬಿದನೂರು ವ್ಯಾಪ್ತಿಯಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ: ಬೈಕ್ ಕಳ್ಳರನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪೊಲೀಸರು ಓದಿ: ಸಹೋದರಿಯರಿಗೆ ಚುಡಾಯಿಸಿ, ಅವಾಚ್ಯ ಶಬ್ದದಿಂದ ನಿಂದನೆ ಆರೋಪ: ಪ್ರಕರಣ ದಾಖಲು
ಆರೋಪಿಗಳು ಮಂಜುನಾಥ್ (26), ಶ್ರೀನಿವಾಸ್ (48) ಗುಡಿಬಂಡೆ ಪಟ್ಟಣದ ನಿವಾಸಿಗಳು ಎಂದು ತಿಳಿದು ಬಂದಿದೆ. ಕೃಷಿ ನೀತಿ ವಿರೋಧಿಸಿ ರೈತ ಸಂಘದ ವತಿಯಿಂದ ಬೆಂಗಳೂರಿಗೆ ಟ್ರ್ಯಾಕ್ಟರ್ ಪರೇಡ್ ಹಮ್ಮಿಕೊಂಡಿದ್ದ ವೇಳೆ ಇಂದು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ಪಿಎಸ್ಐ ಚಂದ್ರಿಕಾ ಹಾಗೂ ಅವರ ಸಿಬ್ಬಂದಿ ಬೆಂಗಳೂರಿಗೆ ತೆರಳುವ ವಾಹನಗಳ ತಪಾಸಣೆ ಮಾಡಿದ್ದಾರೆ.
ಈ ಸಮಯದಲ್ಲಿ ನಗರದ ನಾಗಪ್ಪ ಬ್ಲಾಕ್ನಲ್ಲಿ ಅಪರಿಚಿತರು ಹೀರೋ ಸ್ಪ್ಲೆಂಡರ್ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದನ್ನು ಗಮನಿಸಿದ ಸಿಬ್ಬಂದಿ ಅವರನ್ನು ತಡೆಯಲು ಮುಂದಾದಾಗ ಗಾಬರಿಗೊಂಡು ಪರಾರಿಯಾಗಲು ಯತ್ನಿಸಿದ್ದಾರೆ. ಬೆನ್ನಟ್ಟಿದ ಪೊಲೀಸರು ಅವರನ್ನು ಹಿಡಿದು ವಿಚಾರಣೆಗೆ ಒಳಪಡಿಸಿದಾಗ ವಾಹನವನ್ನು ಕಳವು ಮಾಡಿಕೊಂಡು ಬರುತ್ತಿರುವುದಾಗಿ ತಿಳಿಸಿದ್ದಾರೆ.
ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಸುಮಾರು 2 ಲಕ್ಷ ರೂ. ಮೌಲ್ಯದ ದ್ವಿಚಕ್ರ ವಾಹನಗಳನ್ನು ಕಳವು ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಸದ್ಯ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಪಿಎಸ್ಐ ಪ್ರಸನ್ನ ಕುಮಾರ್, ಎಎಸ್ಐ ಅಂಜಿನಪ್ಪ, ಕಾನ್ಸ್ಟೇಬಲ್ಗಳಾದ ಲೋಕೇಶ್, ಗೋಪಿ, ಶಿವಶಂಕರ್, ದೇವರಾಜ್, ಸುರೇಶ್, ಚಾಲಕ ಅಶ್ವತ್ಥ್ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.