ಉತ್ತರ ಪ್ರದೇಶ:ಲಾರಿ ಹಾಗೂ ಟೆಂಪೋ ನಡುವೆ ಡಿಕ್ಕಿಯಾದ ಪರಿಣಾಮ ಟೆಂಪೋದಲ್ಲಿದ್ದ ಮೂವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಹರ್ದೋಯಿ ಜಿಲ್ಲೆಯ ಕತ್ರಾ ಬಿಲ್ಹೌರ್ ಹೆದ್ದಾರಿಯಲ್ಲಿ ನಡೆದಿದೆ.
ಲಾರಿ - ಟೆಂಪೋ ಮುಖಾಮುಖಿ: ಮೂವರ ದುರ್ಮರಣ - ಹರ್ದೋಯಿ
ಲಾರಿ ಹಾಗೂ ಟೆಂಪೋ ನಡುವೆ ಡಿಕ್ಕಿಯಾದ ಪರಿಣಾಮ ಟೆಂಪೋದಲ್ಲಿದ್ದ ಮೂವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಲಾರಿ ಚಾಲಕ ಅತಿ ವೇಗವಾಗಿ ವಾಹನ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಮೃತರನ್ನು ಮನೋಜ್ (35), ಬಲಿರಾಮ್ (60) ಹಾಗೂ ಶ್ರೀಪಾಲ್ (30) ಎಂದು ಗುರುತಿಸಲಾಗಿದೆ. ಮನೋಜ್ ಸಾವನ್ನಪ್ಪಿದ್ದು, ಇನ್ನಿಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇನ್ನೂ ಇಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನು ಹರ್ದೋಯಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಲಾರಿ ಚಾಲಕ ಅತಿ ವೇಗವಾಗಿ ವಾಹನ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನೆ ಬಳಿಕ ಆತ ಪರಾರಿಯಾಗಿದ್ದಾನೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಈ ಸಂಬಂಧ ಟ್ರಕ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿ, ಲಾರಿಯನ್ನು ವಶಕ್ಕೆ ಪಡೆದಿದ್ದು, ಆತನಿಗಾಗಿ ಹುಡುಕುತ್ತಿದ್ದಾರೆ.