ಕರ್ನಾಟಕ

karnataka

ETV Bharat / jagte-raho

ಮರಕ್ಕೆ ಡಿಕ್ಕಿ ಹೊಡೆದ ಕಾರು: ಸ್ಥಳದಲ್ಲೇ ಮೂವರು ಯುವಕರ ಸಾವು - ಉತ್ತರ ಪ್ರದೇಶ ರಸ್ತೆ ಅಪಘಾತ ಸುದ್ದಿ

ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

Three died in Meerut after car rams into a tree
ಮರಕ್ಕೆ ಡಿಕ್ಕಿ ಹೊಡೆದ ಕಾರು

By

Published : Jan 2, 2021, 10:46 AM IST

ಮೀರತ್ (ಉತ್ತರ ಪ್ರದೇಶ): ಮರಕ್ಕೆ ಕಾರು ಡಿಕ್ಕಿ ಹೊಡೆದು ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಮವನ ನಗರದಲ್ಲಿ ನಡೆದಿದೆ.

ತಡರಾತ್ರಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಕ್ರೇನ್​ ಸಹಾಯದಿಂದ ಮೃತದೇಹಗಳನ್ನು ಹೊರತೆಗೆದಿದ್ದಾರೆ.

ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಆಂಧ್ರಪ್ರದೇಶದಲ್ಲಿ ಜವರಾಯನ ಅಟ್ಟಹಾಸ.. ಪ್ರತ್ಯೇಕ ಅಪಘಾತದಲ್ಲಿ ಐವರ ಸಾವು!

ಮೃತರನ್ನು ಇಂಚೋಲಿ ಗ್ರಾಮದ ನಿವಾಸಿಗಳಾದ ಆದಿಲ್ (20), ಸಿಖಂದರ್ (21) ಮತ್ತು ಸಲ್ಮಾನ್ (19) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ABOUT THE AUTHOR

...view details