ತೆಲಂಗಾಣ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತೆಲಂಗಾಣದ ಸಿದ್ದಿಪೇಟೆ ಜಿಲ್ಲೆಯ ಪ್ರಜ್ಞಾಪುರ ಎಂಬಲ್ಲಿ ನಡೆದಿದೆ.
ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರ ದುರ್ಮರಣ - ಹೈದರಾಬಾದ್
ತೆಲಂಗಾಣದ ಸಿದ್ದಿಪೇಟೆ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತೆಲಂಗಾಣ ರಸ್ತೆ ಅಪಘಾತ
ಮೃತರನ್ನು ಮಂಚೇರಿಯಲ್ ಮೂಲದ ಅಂಜಿಬಾಬು, ಸಾಯಿ ಪ್ರಸಾದ್ ಹಾಗೂ ಗಣೇಶ್ ಎಂದು ಗುರುತಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಇನ್ನು ಗಂಭೀರವಾಗಿ ಗಾಯಗೊಂಡಿರುವ ಕಾರು ಚಾಲಕ ಭಾನು ಪ್ರಸಾದ್ ಎಂಬುವರನ್ನು ಹೈದರಾಬಾದ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.