ನವದೆಹಲಿ:ಇಬ್ಬರು ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಇಬ್ಬರು ಆರೋಪಿಗಳನ್ನು ಹಾಗೂ ಕೃತ್ಯದ ವಿಡಿಯೋವನ್ನು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಒಬ್ಬನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ರಾಷ್ಟ್ರ ರಾಜಧಾನಿಯ ವಾಜಿರ್ಪುರದ ಜೆಜೆ ಕಾಲೋನಿಯಲ್ಲಿ ಡಿಸೆಂಬರ್ 29ರ ರಾತ್ರಿ ಆರೋಪಿ ಯುವಕರು ಕೃತ್ಯ ಎಸಗಿದ್ದರು. ಸಂತ್ರಸ್ತ ಯುವತಿಯರ ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳನ್ನು ಹುಡುಕಿ ಅರೆಸ್ಟ್ ಮಾಡಿದ್ದಾರೆ.