ಕರ್ನಾಟಕ

karnataka

ETV Bharat / jagte-raho

ಪೊಲೀಸರ ಯಶಸ್ವಿ ಕಾರ್ಯಾಚರಣೆ: ಒಂದೂವರೆ ಲಕ್ಷ ರೂ. ಮೌಲ್ಯದ ಗಾಂಜಾ ವಶ

ಗದಗ ಜಿಲ್ಲೆಯಲ್ಲಿ ಕಳೆದ 15 ದಿನದಿಂದ ಅಕ್ರಮ ಮದ್ಯ, ಗಾಂಜಾ ಮಾರಾಟದ ಪ್ರಕರಣಗಳನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದು, ಇಂದು ಒಂದೂವರೆ ಲಕ್ಷ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ.

By

Published : Sep 14, 2020, 2:18 PM IST

Arrest
Arrest

ಗದಗ : ಗಾಂಜಾ ಬೆಳೆದು, ಮಾರಾಟ ಮಾರುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿ ಆತನಿಂದ ಒಂದೂವರೆ ಲಕ್ಷ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಮುಂಡರಗಿ ತಾಲೂಕಿನ ಡೋಣಿ ಗ್ರಾಮದ ಪ್ರವೀಣಗೌಡ ಭರಮಗೌಡ ಜಯನಗೌಡ್ರ ಬಂಧಿತ ಆರೋಪಿ. ಮುಂಡರಗಿ ಸಿಪಿಐ ಎಸ್.ಎಂ.ಬೆಂಕಿ ನೇತೃತ್ವದ ತಂಡ ದಾಳಿ ನಡೆಸಿ, ಆರೋಪಿಯಿಂದ 1 ಕೆಜಿ 200 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಇನ್ನು ರೋಣದಲ್ಲಿ ಡಿವೈಎಸ್​​​​ಪಿ ಶಿವಾನಂದ ಕಟಗಿ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ, ಸವಡಿ ಗ್ರಾಮದ ನಿಂಗನಗೌಡ ಸಂಗನಗೌಡ ಮುಗನೂರ (ಕರಮಡಿ) ಎಂಬಾತನನ್ನು ಬಂಧಿಸಿದ್ದಾರೆ. ಜೊತೆಗೆ ಆರೋಪಿಯಿಂದ 5 ಸಾವಿರ ರೂ. ಮೌಲ್ಯದ 500 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.

ರಾಜ್ಯದಲ್ಲಿ ಡ್ರಗ್ಸ್ ದಂಧೆಯ ಜಾಲದ ಕುರಿತು ತನಿಖೆ ಆರಂಭವಾದ ನಂತರ ಗೃಹ ಸಚಿವ ಬಸವರಾಜ ಬೊಮ್ಮಾಯಿ ಎಲ್ಲಾ ಜಿಲ್ಲೆಗಳ ಎಸ್‌ಪಿಗಳಿಗೆ ಗಾಂಜಾ ಮತ್ತು ಇತರೆ ಅಕ್ರಮ ಚಟುವಟಿಕೆಗಳಿಗೆ ತಡೆ ಹಾಕಲು ಸೂಚಿಸಿದ್ದಾರೆ. ಅದರ ಪರಿಣಾಮವಾಗಿ ಜಿಲ್ಲೆಯಲ್ಲಿ ಕಳೆದ 15 ದಿನದಿಂದ ಅಕ್ರಮ ಮದ್ಯ, ಗಾಂಜಾ ಮಾರಾಟದ ಪ್ರಕರಣಗಳನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ.

ABOUT THE AUTHOR

...view details