ಕರ್ನಾಟಕ

karnataka

ETV Bharat / jagte-raho

ಗೂಬೆ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ - Vijayapura crime latest news

ಸಿಂದಗಿ ತಾಲೂಕಿನ‌ ಕುಮಸಗಿ ಬಳಿ ಗೂಬೆಗಳನ್ನು ಅಕ್ರಮವಾಗಿ ಹಿಡಿದಿಟ್ಟುಕೊಂಡು ಮಹಾರಾಷ್ಟ್ರಕ್ಕೆ ಮಾರಾಟ ಮಾಡಲು ತೆರಳುತ್ತಿದ್ದ ವೇಳೆ ಸಂಚಾರಿ ಅರಣ್ಯ ವಿಭಾಗದ ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಬಂಧಿಸಿದ್ದಾರೆ.

Arrest
Arrest

By

Published : Oct 5, 2020, 9:43 AM IST

ವಿಜಯಪುರ: ಅಕ್ರಮವಾಗಿ ಗೂಬೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದ ಬಸಣ್ಣ ಪವಾರ ಹಾಗೂ ವಿಠ್ಠಲ ಪವಾರ ಎಂದು ಗುರುತಿಸಲಾಗಿದೆ. ಬಂಧಿತರಿಂದ ಮೂರು ಗೂಬೆ, ಪಂಜರ ಹಾಗೂ ಎರಡು ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ಸಿಂದಗಿ ತಾಲೂಕಿನ‌ ಕುಮಸಗಿ ಬಳಿ ಗೂಬೆಗಳನ್ನು ಅಕ್ರಮವಾಗಿ ಹಿಡಿದಿಟ್ಟುಕೊಂಡು ಮಹಾರಾಷ್ಟ್ರಕ್ಕೆ ಮಾರಾಟ ಮಾಡಲು ತೆರಳುತ್ತಿದ್ದ ವೇಳೆ ಸಂಚಾರಿ ಅರಣ್ಯ ವಿಭಾಗದ ಬೆಳಗಾವಿ ಪಿಎಸ್ ಐ ರೋಹಿಣಿ ಪಾಟೀಲ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಈ ವೇಳೆ ಗೂಬೆ ಸಮೇತ ಆರೋಪಿಗಳನ್ನು ಬಂಧಿಸಿದ್ದಾರೆ.

ABOUT THE AUTHOR

...view details