ಬೆಂಗಳೂರು: ಬೈಕ್ಗೆ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ಇಲ್ಲಿನ ಓಲ್ಡ್ ಏರ್ಪೋರ್ಟ್ ರಸ್ತೆಯಲ್ಲಿ ನಿನ್ನೆ ರಾತ್ರಿ ನಡೆದಿದೆ.
ಭೀಕರ ರಸ್ತೆ ಅಪಘಾತ: ಬೆಂಗಳೂರಲ್ಲಿ ಇಬ್ಬರನ್ನು ಬಲಿ ಪಡೆದ ಆ್ಯಂಬುಲೆನ್ಸ್ - ಬೆಂಗಳೂರಿನ ಓಲ್ಡ್ ಏರ್ಪೋರ್ಟ್ ರಸ್ತೆ ಅಪಘಾತ ನ್ಯೂಸ್
ಬೈಕ್ಗೆ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಓಲ್ಡ್ ಏರ್ಪೋರ್ಟ್ ರಸ್ತೆಯಲ್ಲಿ ನಡೆದಿದೆ.
Road accident
ಇಬ್ರಾಹಿಂ ಖಲೀಲ್ ಹಾಗೂ ಮನ್ಸೂರ್ ಮೃತರು. ಓಲ್ಡ್ ಏರ್ಪೋರ್ಟ್ ರಸ್ತೆಯ ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿಕೊಂಡು ಬೈಕ್ನಲ್ಲಿ ನಾಗವಾರ ಕಡೆ ಇಬ್ಬರು ಯುವಕರು ಹೊರಟಿದ್ದರು. ಈ ವೇಳೆ ಒನ್ ವೇ ನಲ್ಲಿ ಆ್ಯಂಬುಲೆನ್ಸ್ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಇವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಯುವಕರು ಸಾವನ್ನಪ್ಪಿದ್ದಾರೆ.
ಈ ಸಂಬಂಧ ಆ್ಯಂಬುಲೆನ್ಸ್ ಚಾಲಕನ ವಿರುದ್ಧ ಅಶೋಕ್ ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.