ಕೊಪ್ಪಳ: ಹೊಲದಲ್ಲಿ ಕೆಲಸ ಮುಗಿಸಿಕೊಂಡು ವಾಪಸ್ ಬರುತ್ತಿದ್ದಾಗ ಇಬ್ಬರು ರೈತ ಮಹಿಳೆಯರು ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕರಮುಡಿ ಗ್ರಾಮದಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ.
ಕೊಪ್ಪಳ: ಹಳ್ಳದ ನೀರಿನಲ್ಲಿ ಕೊಚ್ಚಿ ಹೋದ ಇಬ್ಬರು ರೈತ ಮಹಿಳೆಯರು - Koppal rain damage news
ಯಲಬುರ್ಗಾ ತಾಲೂಕಿನ ಕರಮುಡಿ ಗ್ರಾಮದಲ್ಲಿ ನಿನ್ನೆ ರಾತ್ರಿ ಇಬ್ಬರು ರೈತ ಮಹಿಳೆಯರು ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.
River
ರತ್ನಮ್ಮ ಮಾನಶೆಟ್ಟಿ (50) ಹಾಗೂ ಶಾಂತವ್ವ ಮ್ಯಾಗೇರಿ (45) ಎಂಬ ರೈತ ಮಹಿಳೆಯರು ಹಳ್ಳದಲ್ಲಿ ಕೊಚ್ಚಿ ಹೋಗಿದ್ದಾರೆ. ಗ್ರಾಮಸ್ಥರು ಹಾಗೂ ಪೊಲೀಸರು ಮೃತರ ಶವಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಈ ಪೈಕಿ ರತ್ನಮ್ಮ ಮಾನಶೆಟ್ಟಿಯ ಶವ ಪತ್ತೆಯಾಗಿದ್ದು, ಶಾಂತವ್ವಳಿಗಾಗಿ ಹುಡುಕಾಟ ಮುಂದುವರೆಸಿದ್ದಾರೆ.
ಈ ಘಟನೆ ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.