ಮುಂಬೈ: ಫೇಸ್ಬುಕ್ನಲ್ಲಿ ಪರಿಚಯವಾಗಿ ಸ್ನೇಹಿತನಾಗಿರುವ ಯುವಕನೋರ್ವ ತನ್ನನ್ನು ಮದುವೆಯಾಗಲು ನಿರಾಕರಿಸಿದ್ದಕ್ಕೆ 'ಉಡಾನ್' ಟೆಲಿವಿಷನ್ ಶೋ ಖ್ಯಾತಿಯ ನಟಿ ಮಾಲ್ವಿ ಮಲ್ಹೋತ್ರಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.
ಮುಂಬೈನ ವರ್ಸೋವಾದ ಕೃಷಿ ಮತ್ತು ಮೀನುಗಾರಿಕಾ ವಿಶ್ವವಿದ್ಯಾಲಯದ ರಸ್ತೆಯಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ. ದುಬೈನಲ್ಲಿ ಶೂಟಿಂಗ್ ಮುಗಿಸಿ ಮಾಲ್ವಿ ನಿನ್ನೆಯಷ್ಟೇ ಮುಂಬೈಗೆ ಹಿಂದಿರುಗಿದ್ದರು. ಗಾಯಗೊಂಡಿರುವ ಮಾಲ್ವಿಯನ್ನು ಕೋಕಿಲಾಬೆನ್ ಅಂಬಾನಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.