ಬರೇಲಿ (ಉತ್ತರ ಪ್ರದೇಶ):ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ವಯಸ್ಸಾದ ಪೋಷಕರನ್ನೇ ಮಗ ಗುಂಡಿಕ್ಕಿ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ.
ಆಸ್ತಿ ವಿವಾದ: ಹೆತ್ತವರನ್ನೇ ಗುಂಡಿಕ್ಕಿ ಕೊಂದ ಲಾಯರ್ - ಪೋಷಕರನ್ನೇ ಗುಂಡಿಕ್ಕಿ ಹತ್ಯೆಗೈದ ಮಗ
ಆಸ್ತಿ ವಿಚಾರಕ್ಕೆ ಗುಂಡು ಹಾರಿಸಿ ಹೆತ್ತ ತಂದೆ - ತಾಯಿಯನ್ನು ವಕೀಲನೊಬ್ಬ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಹೆತ್ತವರನ್ನೇ ಗುಂಡಿಕ್ಕಿ ಕೊಂದ ಲಾಯರ್
ಮೃತ ವೃದ್ಧ ದಂಪತಿಗೆ ಇಬ್ಬರು ಗಂಡು ಮಕ್ಕಳು ಹಾಗೂ ನಾಲ್ವರು ಹೆಣ್ಣು ಮಕ್ಕಳಿದ್ದಾರೆ. ಹಿರಿಯ ಮಗನಾದ ದುರ್ವೇಶ್ ಗಂಗ್ವಾರ್ ಕೃತ್ಯ ಎಸಗಿದ್ದು, ಈತ ವೃತ್ತಿಯಲ್ಲಿ ವಕೀಲನಾಗಿದ್ದಾನೆ.
ಸ್ಥಳಕ್ಕೆ ಬಂದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆ ಬಳಿಕ ಪರಾರಿಯಾಗಿರುವ ಆರೋಪಿ ದುರ್ವೇಶ್ಗಾಗಿ ಪೊಲೀಸರು ಬಲೆ ಬೀಸಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರೋಹಿತ್ ಸಿಂಗ್ ಮಾಹಿತಿ ನೀಡಿದ್ದಾರೆ.