ವಿಜಯಪುರ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಗರದ ಸ್ಟೇಷನ್ ರಸ್ತೆಯಲ್ಲಿ ನಡೆಸಿದೆ.
ವಿಜಯಪುರ: ಅಪರಿಚಿತ ವ್ಯಕ್ತಿಗಳಿಂದ ಯುವತಿ ಮೇಲೆ ಮಾರಣಾಂತಿಕ ಹಲ್ಲೆ - ಗೋಲ ಗುಂಬಜ್ ಪೊಲೀಸ್ ಠಾಣೆ
ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ 24 ವರ್ಷದ ಯುವತಿ ಸಾಯಂಕಾಲ ಕೆಲಸ ಮುಗಿಸಿಕೊಂಡು ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದಳು. ಏಕಾಏಕಿ ಇಬ್ಬರು ಯುವಕರು ಕಬ್ಬಿಣದ ರಾಡ್ ಮೂಲಕ ಹಲ್ಲೆ ಮಾಡಿದ್ದಾರೆ ಎಂದು ಯುವತಿ ಆರೋಪ ಮಾಡುತ್ತಿದ್ದಾಳೆ.
ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ 24 ವರ್ಷದ ಯುವತಿ ಸಾಯಂಕಾಲ ಕೆಲಸ ಮುಗಿಸಿಕೊಂಡು ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದಳು. ಏಕಾಏಕಿ ಇಬ್ಬರು ಯುವಕರು ಕಬ್ಬಿಣದ ರಾಡ್ ಮೂಲಕ ಹಲ್ಲೆ ಮಾಡಿದ್ದಾರೆ ಎಂದು ಯುವತಿ ಆರೋಪ ಮಾಡುತ್ತಿದ್ದಾಳೆ. ಮಾರಣಾಂತಿಕ ಹಲ್ಲೆಯಿಂದ ಯುವತಿ ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯರು ಜಿಲ್ಲಾಸ್ಪತ್ರೆ ದಾಖಲಿಸಿದ್ದಾರೆ.
ಇನ್ನು ಹಲ್ಲೆಗೆ ಕಾರಣವಾದ ವ್ಯಕ್ತಿಗಳು ಯಾರು?. ಯಾವ ಕಾರಣಕ್ಕಾಗಿ ಹಲ್ಲೆ ನಡೆಸಿದರು ಎಂದು ಸ್ಪಷ್ಟವಾಗಿಲ್ಲ. ಅಪರಿಚಿತ ವ್ಯಕ್ತಿಗಳು ಮುಸಕುದಾರಿಯಾಗಿ ಬಂದು ಕಬ್ಬಿಣದ ರಾಡ್ ಮೂಲಕ ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಹಲ್ಲೆ ಮಾಡಿದ ವ್ಯಕ್ತಿಗಳ ಪರಿಚಯವಿಲ್ಲ ಎಂದು ಯುವತಿ ಆರೋಪ ಮಾಡುತ್ತಿದ್ದಾರೆ. ಈ ಕುರಿತು ಗೋಲ ಗುಂಬಜ್ ಪೊಲೀಸ್ ಠಾಣೆಯಲ್ಲಿ ಯುವತಿ ಕುಟುಂಬಸ್ಥರು ದೂರು ದಾಖಲಿಸಿದ್ದು, ತನಿಖೆಯಿಂದ ಯುವತಿಯ ಮಾರಣಾಂತಿಕ ಹಲ್ಲೆ ಕುರಿತು ಮಾಹಿತಿ ತಿಳಿದು ಬರಬೇಕಿದೆ.