ಕೊಪ್ಪಳ: ಬೈಕ್ಗೆ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗಂಗಾವತಿ ತಾಲೂಕಿನ ಗುಂಡೂರು ಕ್ರಾಸ್ ಬಳಿ ನಡೆದಿದೆ.ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಉಡಾ ಗ್ರಾಮದ ನಿವಾಸಿ ಶೈನಾಜ್ ಬೇಗಂ (40) ಮೃತ ಮಹಿಳೆ ಎಂದು ತಿಳಿದು ಬಂದಿದೆ.
ಹಿಂಬದಿಯಿಂದ ಲಾರಿ ಡಿಕ್ಕಿ: ಮಹಿಳೆ ಸ್ಥಳದಲ್ಲೇ ಸಾವು - Koppal
ಹಿಂಬದಿಯಿಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿ ಚಲಿಸುತ್ತಿದ್ದ ಮಹಿಳೆವೋರ್ವಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಗಂಗಾಗವತಿ ತಾಲೂಕಲ್ಲಿ ಈ ಅವಘಡ ಸಂಭವಿಸಿದೆ.
ಮೃತ ಮಹಿಳೆ ಶೈನಾಜ್ ಬೇಗಂ
ತಮ್ಮ ಗ್ರಾಮದಿಂದ ಕೊಪ್ಪಳ ಜಿಲ್ಲೆಯ ವಡ್ಡರಹಟ್ಟಿ ಗ್ರಾಮಕ್ಕೆ ಶೈನಾಜ್ ಬೇಗಂ ಬೈಕ್ನಲ್ಲಿ ತೆರಳುತ್ತಿದ್ದರು. ಗುಂಡೂರು ಕ್ರಾಸ್ ಬಳಿ ಹಿಂಬದಿಯಿಂದ ಬಂದು ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಶೈನಾಜ್ ಬೇಗಂ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಇನ್ನು ಬೈಕ್ ಚಲಾಯಿಸುತ್ತಿದ್ದ ವ್ಯಕ್ತಿ ಕೂಡ ಗಾಯಗೊಂಡಿದ್ದಾನೆ. ಘಟನೆ ಕುರಿತಂತೆ ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.