ಬೆಂಗಳೂರು:ಬೈಕ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವಳು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರು-ಹೊಸೂರು ಹೆದ್ದಾರಿಯ ಚಂದಾಪುರ ಫ್ಲೈ ಓವರ್ ಬಳಿ ಸಂಭವಿಸಿದೆ.
ಬೈಕ್ಗೆ ಡಿಕ್ಕಿ ಹೊಡೆದ ಬಸ್: ಮಹಿಳೆ ಸಾವು - Woman death
ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬಳು ಕೆಳಗೆ ಬಿದ್ದಿದ್ದು, ಅದೇ ವೇಳೆ ಬೇರೊಂದು ಬಸ್ ಅವಳ ಮೇಲೆ ಹರಿದಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಮೃತ ಮಹಿಳೆಯನ್ನು ರೇಣುಕಾ (25) ಎಂದು ಗುರುತಿಸಲಾಗಿದೆ. ಹೊಸೂರಿನಿಂದ ಬೆಂಗಳೂರಿಗೆ ಹೊರಟಿದ್ದ ತಮಿಳುನಾಡಿಗೆ ಸೇರಿದ ಬಸ್, ಮುಂದೆ ಹೋಗುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಕೆಳಗೆ ಬಿದ್ದಿದ್ದು, ಅವಳ ಮೇಲೆ ಬೇರೊಂದು ಬಸ್ ಹರಿದ ಪರಿಣಾಮ ಮಹಿಳೆಯ ತಲೆ ಛಿದ್ರಗೊಂಡಿದೆ.
ಇನ್ನು ಘಟನೆಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಮಹಿಳೆ ಮತ್ತು ಗಾಯಗೊಂಡ ವ್ಯಕ್ತಿ ಗಂಡ-ಹೆಂಡತಿಯಾಗಿದ್ದು ಹೆದ್ದಾರಿ ಪಕ್ಕದ ನೆರಳೂರಿನಲ್ಲಿ ವಾಸವಿದ್ದರು. ಆಂಧ್ರದ ಚಿತ್ತೂರು ಜಿಲ್ಲೆಯ ಮದನಪಲ್ಲಿ ಮೂಲದವರಾದ ದಂಪತಿ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರು ಮಕ್ಕಳನ್ನು ಅಗಲಿದ ತಾಯಿ ರೇಣುಕಾಳ ಸಂಬಂಧಿಕರ ಗೋಳು ಮುಗಿಲು ಮುಟ್ಟಿದೆ. ಸ್ಥಳಕ್ಕೆ ಸೂರ್ಯ ಸಿಟಿ ಪೊಲೀಸರು ಆಗಮಿಸಿ ಪರಿಶೀಲನೆ ಮಾಡಿದ್ದಾರೆ.