ರಾಜಸ್ಥಾನ: ಲಾಕ್ಡೌನ್ನಿಂದಾಗಿ ಸರ್ಕಾರಿ ಶಾಲೆಯ ಆವರಣದಲ್ಲಿ ತಂಗಿದ್ದ 40 ವರ್ಷದ ಮಹಿಳೆಯನ್ನೂ ಬಿಡದ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ರಾಜಸ್ಥಾನದ ಸವಾಯಿ ಮಾಧೋಪುರ ಜಿಲ್ಲೆಯಲ್ಲಿ ನಡೆದಿದೆ.
ಶಾಲೆಯಲ್ಲಿ ತಂಗಿದ್ದ ಮಹಿಳೆ ಮೇಲೆ ಕಾಮುಕರಿಂದ ಗ್ಯಾಂಗ್ ರೇಪ್! - Rajasthan rape case
ಲಾಕ್ಡೌನ್ನಿಂದಾಗಿ ಸರ್ಕಾರಿ ಶಾಲೆಯ ಆವರಣದಲ್ಲಿ ತಂಗಿದ್ದ ಜೈಪುರ ಮೂಲದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕಾಮುಕರು ಅಟ್ಟಹಾಸ ಮೆರೆದಿದ್ದಾರೆ.
ಜೈಪುರದ ಮೂಲದ ಸಂತ್ರಸ್ತೆ ಲಾಕ್ಡೌನ್ನಿಂದಾಗಿ ಕಳೆದ ಒಂದು ತಿಂಗಳಿನಿಂದ ಸವಾಯಿ ಮಾಧೋಪುರದಲ್ಲಿ ಸಿಲುಕಿಕೊಂಡಿದ್ದು, ತನ್ನೂರಿಗೆ ಕಾಲ್ನಡಿಗೆ ಮೂಲಕ ತೆರಳಲು ನಿರ್ಧರಿಸಿದ್ದಾಳೆ. ಈ ವೇಳೆ, ಶಾಲೆಯ ಆವರಣದಲ್ಲಿ ವಿಶ್ರಾಂತಿ ಪಡೆಯಲು ತಂಗಿದ್ದು, ಗುರುವಾರ ರಾತ್ರಿ ಮೂವರು ಆರೋಪಿಗಳು ಕೃತ್ಯ ಎಸಗಿದ್ದಾರೆ ಎಂದು ಡಿಎಸ್ಪಿ ಪಾರ್ಥ ಶರ್ಮಾ ತಿಳಿಸಿದ್ದಾರೆ.
ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆಕೆ ನೀಡಿದ ಹೇಳಿಕೆಯನ್ನು ರೆಕಾರ್ಡ್ ಮಾಡಿಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇನ್ನು ಆರೋಪಿಗಳನ್ನು ಬಂಧಿಸಿರುವ ಬಟೋಡ್ ಠಾಣಾ ಪೊಲೀಸರು, ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದಾರೆ ಎಂದು ಶರ್ಮಾ ಹೇಳಿದ್ದಾರೆ.