ಬೆಂಗಳೂರು: ಡಿ ಜೆ ಹಳ್ಳಿ ಮತ್ತು ಕೆ ಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ವೇಳೆ ಮಟನ್ ಅಂಗಡಿ ನಡೆಸುತ್ತಿದ್ದ ಯುವಕನೋರ್ವ ಗಲಭೆಯಲ್ಲಿ ಸಾವನ್ನಪ್ಪಿದ್ದಾನೆ.
ಸದ್ಯ ಪೊಲೀಸರು ಗಲಭೆಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಗಲಭೆಯಲ್ಲಿ ಯಾಸಿನ್ ಎಂಬ ಯುವಕ ಬಲಿಯಾಗಿದ್ದು, ಆತನ ಕುಟುಂಬಸ್ಥರು ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.