ಮಂಗಳೂರು: ನಗರದ ಪಚ್ಚನಾಡಿ ರೈಲ್ವೆ ಹಳಿಯಲ್ಲಿ ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ.
ಮಂಗಳೂರು: ರೈಲ್ವೆ ಹಳಿಯಲ್ಲಿ ಯುವಕನ ಮೃತದೇಹ ಪತ್ತೆ - ಪಚ್ಚನಾಡಿ ರೈಲ್ವೇ ಹಳಿ
ಪಚ್ಚನಾಡಿ ರೈಲ್ವೆ ಹಳಿಯಲ್ಲಿ ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
Young man dead body found
ಸುಮಾರು 25-30 ವರ್ಷದೊಳಗಿನ ಯುವಕನ ಮೃತದೇಹ ಇದಾಗಿದ್ದು, ಮೇಲ್ನೋಟಕ್ಕೆ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ರೈಲ್ವೆ ಹಾಗೂ ಮಂಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹದ ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಪರಿಚಯ ಇದ್ದವರು ರೈಲ್ವೆ ಪೊಲೀಸರನ್ನು ಸಂಪರ್ಕಿಸಬೇಕೆಂದು ಮನವಿ ಮಾಡಿದ್ದಾರೆ.