ತಿರುಚಿರಾಪಳ್ಳಿ(ತಮಿಳುನಾಡು): ಇನ್ಸ್ಟಾಗ್ರಾಂನಲ್ಲಿ ಪ್ರೇಮ ನಿವೇದನೆಯನ್ನು ರಿಜೆಕ್ಟ್ ಮಾಡಿದ್ದಕ್ಕೆ 23 ವರ್ಷದ ಯುವಕನೋರ್ವ ನೇಣಿಗೆ ಶರಣಾಗಿರುವ ಘಟನೆ ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ನಡೆದಿದೆ.
ಇನ್ಸ್ಟಾಗ್ರಾಂನಲ್ಲಿ ಯುವತಿಗೆ ಪ್ರೇಮ ನಿವೇದನೆ: ರಿಜೆಕ್ಟ್ ಮಾಡಿದ್ದಕ್ಕೆ ಯುವಕ ಆತ್ಮಹತ್ಯೆ
ಇನ್ಸ್ಟಾಗ್ರಾಂನಲ್ಲಿ ಫೋಟೋ ಕೂಡ ಅಪ್ಲೋಡ್ ಮಾಡಿರದ ಯುವತಿ ಮೇಲೆ ಪ್ರೀತಿಯಾಗಿದ್ದ ಯುವಕನೋರ್ವ ಆಕೆ ಪ್ರೇಮ ನಿವೇದನೆಯನ್ನು ತಿರಸ್ಕರಿಸಿದಳೆಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮೃತ ಆನಂದ್ ಕುಮಾರ್ ಸೇಲಂನಲ್ಲಿ ಖಾಸಗಿ ಬ್ಯಾಂಕ್ವೊಂದರ ಎಟಿಎಂಗೆ ಹಣ ತುಂಬುವ ಸಿಬ್ಬಂದಿಯಾಗಿದ್ದು, ಲಾಕ್ಡೌನ್ನಿಂದಾಗಿ ಕಳೆದೆರಡು ತಿಂಗಳಿನಿಂದ ತಿರುಚಿರಾಪಳ್ಳಿಯಲ್ಲಿರುವ ಸಂಬಂಧಿಕರ ಮನೆಯಲ್ಲಿ ವಾಸಿಸುತ್ತಿದ್ದ. ಇನ್ಸ್ಟಾಗ್ರಾಂನಲ್ಲಿ ಫೋಟೋ ಕೂಡ ಅಪ್ಲೋಡ್ ಮಾಡಿರದ ಯುವತಿ ಮೇಲೆ ಆನಂದ್ಗೆ ಪ್ರೀತಿಯಾಗಿತ್ತು. ಆದರೆ ಈತನ ಪ್ರೇಮ ನಿವೇದನೆಯನ್ನು ಆಕೆ ತಿರಸ್ಕರಿಸಿದ್ದಳು. ಬಳಿಕ ಆಕೆಯ ಖಾತೆಯನ್ನು ಬ್ಲಾಕ್ ಮಾಡಿದ್ದನು. ಈ ಬೇಸರದಿಂದ ಹೊರಬರಲಾಗದೆ ಆನಂದ್, ಸಂಬಂಧಿಕರ ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ.
ಸ್ಥಳಕ್ಕೆ ತಿರುವೆರುಂಬೂರ್ ಪೊಲೀಸ್ ಇನ್ಸ್ಪೆಕ್ಟರ್ ಜ್ಞಾನವೇಲನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.