ಕರ್ನಾಟಕ

karnataka

ETV Bharat / lifestyle

ಬಜೆಟ್ 2022: ಮಾನಸಿಕ ಆರೋಗ್ಯಕ್ಕೆ ಒತ್ತು.. ಟೆಲಿ - ಮೆಂಟಲ್ ಹೆಲ್ತ್​ ಸೆಂಟರ್​ ಸ್ಥಾಪನೆ - ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಪರಿಸರ ವ್ಯವಸ್ಥೆ

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಅನ್ನು ನೋಡಲ್ ಕೇಂದ್ರವಾಗಿಸಿ ದೇಶದಲ್ಲಿ 23 ಟೆಲಿ - ಮೆಂಟಲ್ ಆರೋಗ್ಯ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿ ನೀಡಿದ್ದಾರೆ.

ಬಜೆಟ್ 2022
Health Sector

By

Published : Feb 1, 2022, 1:10 PM IST

ನವದೆಹಲಿ:2022-23ನೇ ಸಾಲಿನ ಕೇಂದ್ರ ಬಜೆಟ್​ ಅನ್ನು ಮಂಡಿಸಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೊರೊನಾ ಸಾಂಕ್ರಾಮಿಕವು ಎಲ್ಲ ವಯಸ್ಸಿನ ಜನರಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಹೆಚ್ಚಿಸಿದೆ ಎಂದು ಹೇಳಿದರು. ಈ ಬಾರಿಯ ಬಜೆಟ್​​ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳು ಈ ಕೆಳಕಂಡಂತಿವೆ.

  • ಟೆಲಿ-ಮೆಂಟಲ್ ಆರೋಗ್ಯ ಕೇಂದ್ರಗಳು: ಭಾರತದಲ್ಲಿ ರಾಷ್ಟ್ರೀಯ ಟೆಲಿ ಮೆಂಟಲ್ ಹೆಲ್ತ್ ಕಾರ್ಯಕ್ರಮವನ್ನು ಸ್ಥಾಪಿಸುವ ಯೋಜನೆಯನ್ನು ಪ್ರಕಟಿಸಿದ ಹಣಕಾಸು ಸಚಿವರು, ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಅನ್ನು ನೋಡಲ್ ಕೇಂದ್ರವಾಗಿಸಿ 23 ಟೆಲಿ-ಮೆಂಟಲ್ ಆರೋಗ್ಯ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದರು. ಗುಣಮಟ್ಟದ ಮಾನಸಿಕ ಆರೋಗ್ಯ ಸಮಾಲೋಚನೆ ಮತ್ತು ಆರೈಕೆ ಸೇವೆಗಳ ಪ್ರವೇಶವನ್ನು ಉತ್ತಮಗೊಳಿಸಲು ಈ ಕ್ರಮವನ್ನು ಕೇಂದ್ರ ತೆಗೆದುಕೊಂಡಿದೆ.

ಮಾನಸಿಕ ಆರೋಗ್ಯ ಕಾರ್ಯಕ್ರಮಕ್ಕೆ ಬೆಂಗಳೂರಿನ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ) ತಾಂತ್ರಿಕ ಬೆಂಬಲವನ್ನು ನೀಡಲಿದೆ ಎಂದು ಸೀತಾರಾಮನ್​ ಹೇಳಿದರು.

  • ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಪರಿಸರ ವ್ಯವಸ್ಥೆ -ಇದು ಆರೋಗ್ಯ ಪೂರೈಕೆದಾರರ ಡಿಜಿಟಲ್ ದಾಖಲಾತಿಗಳು ಮತ್ತು ಆರೋಗ್ಯ ಸೌಲಭ್ಯಗಳು, ಅನನ್ಯ ಆರೋಗ್ಯ ಗುರುತು ಮತ್ತು ಆರೋಗ್ಯ ಸೌಲಭ್ಯಗಳಿಗೆ ಸಾರ್ವತ್ರಿಕ ಪ್ರವೇಶವನ್ನು ಒಳಗೊಂಡಿರುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ಕೇಂದ್ರ ಬಜೆಟ್​ 2022 : ಬೆಂಗಳೂರು ಅಭಿವೃದ್ಧಿಗೆ ಮತ್ತಷ್ಟು ಆದ್ಯತೆ

ಜನರ ನಿರೀಕ್ಷೆ ತಲುಪಿಲ್ಲ:ಕೋವಿಡ್​ನಿಂದಾಗಿ ಭಾರೀ ಹೊಡೆತಕ್ಕೊಳಗಾದ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಕೊಡುಗೆಗಳನ್ನು ಜನರು ಬಯಸಿದ್ದರು. ವೈದ್ಯಕೀಯ ವೆಚ್ಚ ಹಾಗೂ ಔಷಧ ಬೆಲೆಗಳಲ್ಲಿ ಇಳಿಕೆಯಾಗಿರಬಹುದು ಎಂದು ಭಾವಿಸಿದ್ದರು. ಕೋವಿಡ್​ ಎರಡನೇ ಅಲೆಯಲ್ಲಿ ಎಷ್ಟೋ ಜನರು ಆಸ್ಪತ್ರೆಯ ಬೆಡ್​ ಚಾರ್ಜ್​ ಹಾಗೂ ಚಿಕಿತ್ಸಾ ವೆಚ್ಚ ಭರಿಸಲಾಗದೆ ಕ್ರೌಡ್​ ಫಂಡಿಂಗ್​ ಮೊರೆ ಹೋದ ಉದಾಹರಣೆಗಳೂ ನಮ್ಮ ಮುಂದಿದೆ. ಆದರೆ ಈ ಬಾರಿಯ ಬಜೆಟ್​ ಜನರ ನಿರೀಕ್ಷೆಯನ್ನು ತಲುಪಿಲ್ಲ.

ಕಳೆದ ವರ್ಷ ನಿರ್ಮಲಾ ಸೀತಾರಾಮನ್ ಅವರು ಆರೋಗ್ಯ ಸೇವೆಗಳನ್ನು ಸುಧಾರಿಸಲು ಮುಂದಿನ ಆರು ವರ್ಷಗಳಲ್ಲಿ ಸರ್ಕಾರವು 64,180 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಿದೆ ಎಂದು ಹೇಳಿದ್ದರು. ಈ ಬಾರಿ 112 ಜಿಲ್ಲೆಗಳು 95 ಪ್ರತಿಶತದಷ್ಟು ಆರೋಗ್ಯ, ಮೂಲಸೌಕರ್ಯದಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಇಲ್ಲೊಮ್ಮೆ ನೋಡಿ - ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ABOUT THE AUTHOR

...view details