Yuvanidhi Scheme Launch event live
ಶಿವಮೊಗ್ಗದಲ್ಲಿ ಯುವನಿಧಿ ಯೋಜನೆಗೆ ಸಿಎಂ ಚಾಲನೆ - LIVE - ಯುವನಿಧಿ ಯೋಜನೆ
<p><strong>ಶಿವಮೊಗ್ಗ: </strong>ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾಗಿರುವ 'ಯುವ ನಿಧಿ' ಇಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಶಿವಮೊಗ್ಗದ ಫ್ರೀಡಂ ಪಾರ್ಕ್ನಲ್ಲಿ ಆಯೋಜಿಸಿದ್ದ ಬೃಹತ್ ವೇದಿಕೆಯಲ್ಲಿ ಮತ್ತೊಂದು ಗ್ಯಾರಂಟಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದ ನೇರ ಪ್ರಸಾರ ಇಲ್ಲಿದೆ.</p><p>ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಮಧು ಬಂಗಾರಪ್ಪ, ಶರಣ ಪ್ರಕಾಶ್ ಪಾಟೀಲ್, ಕೆ.ಜೆ.ಜಾರ್ಜ್, ಸುಧಾಕರ್, ನಾಗೇಂದ್ರ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಎಸ್.ಎನ್.ಚನ್ನಬಸಪ್ಪ ಸೇರಿದಂತೆ ಹಲವು ಗಣ್ಯರು ಹಾಜರಿದ್ದಾರೆ. 1 ಲಕ್ಷ ಜನ ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆ ಮಾತ್ರವಲ್ಲದೇ ದಾವಣಗೆರೆ, ಚಿಕ್ಕಮಗಳೂರು, ಶಿರಸಿ, ಕಾರವಾರ ಸೇರಿದಂತೆ ಐದಾರು ಜಿಲ್ಲೆಗಳಿಂದ ಯುವಕರು ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ವಿಶೇಷವಾಗಿ, ಈ ಯೋಜನೆಗೆ ಅರ್ಜಿ ಹಾಕಿರುವ ನಿರುದ್ಯೋಗಿಗಳನ್ನು ಕರೆತರಲಾಗಿದೆ.</p><p>ಯುವನಿಧಿ' ಯೋಜನೆ: ಕಳೆದ ಡಿಸೆಂಬರ್ 26ರಂದು ಸಿಎಂ 'ಯುವನಿಧಿ' ಯೋಜನೆಯ ನೋಂದಣಿ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. ಈ ಯೋಜನೆ ಅಡಿಯಲ್ಲಿ ಪದವಿ, ಡಿಪ್ಲೊಮಾ ಶಿಕ್ಷಣ ಪಡೆದು 6 ತಿಂಗಳಿನಿಂದ ಉದ್ಯೋಗ ದೊರೆಯದಿದ್ದರೆ, ಗರಿಷ್ಠ 2 ವರ್ಷದವರೆಗೆ ಪದವೀಧರರಿಗೆ 3 ಸಾವಿರ ರೂಪಾಯಿ ಹಾಗೂ ಡಿಪ್ಲೊಮಾ ಪಡೆದವರಿಗೆ 1,500 ರೂಪಾಯಿ ನಿರುದ್ಯೋಗ ಭತ್ಯೆ ಸಿಗಲಿದೆ.</p>
Published : Jan 12, 2024, 1:35 PM IST
|Updated : Jan 12, 2024, 3:33 PM IST
Last Updated : Jan 12, 2024, 3:33 PM IST