ಹೈದರಾಬಾದ್: ಬಳಕೆದಾರರ ಒಪ್ಪಿಗೆ ಇಲ್ಲದೇ ವೈಯಕ್ತಿಕ ಫೋನ್ ನಂಬರ್ ಪಡೆದುಕೊಳ್ಳುವುದು ನಿಯಮಗಳ ಉಲ್ಲಂಘನೆ ಎಂದು ಐಟಿ ಇಲಾಖೆ ಹೇಳಿದೆ. ಇಂತಹ ಘಟನೆಗಳು ಮರುಕಳಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ನಗರದ ಮಲಕಪೇಟೆಯಲ್ಲಿರುವ ಡೆಕಾಥ್ಲಾನ್ ಸಂಸ್ಥೆಗೆ ಎಚ್ಚರಿಕೆ ನೀಡಲಾಗಿದೆ.
ಕೆಲ ಕಾಲ್ ಸೆಂಟರ್ಗಳಿಂದ ಬರುವ ದೂರವಾಣಿ ಕರೆಗಳು ನಗರವಾಸಿಗಳಿಗೆ ಕಿರಿಕಿರಿ ಉಂಟುಮಾಡುತ್ತಿವೆ. ವೈಯಕ್ತಿಕ ಫೋನ್ ಸಂಖ್ಯೆಯನ್ನು ಅವರು ಹೇಗೆ ತಿಳಿದಿದ್ದಾರೆಂದು ಯಾರಿಗೂ ಅರ್ಥವಾಗುವುದಿಲ್ಲ. ಆದರೆ, ಬೆಳಗ್ಗೆ ಮತ್ತು ರಾತ್ರಿ ಬರುವ ಈ ಫೋನ್ ಕರೆಗಳು ಜನರಿಗೆ ಕಿರುಕುಳ ನೀಡುತ್ತಿರುವುದಂತೂ ಸತ್ಯ.
ನಗರದ ಕೆಲವು ಶಾಪಿಂಗ್ ಮಾಲ್‌ಗಳು ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಖರೀದಿ ಮಾಡುವಾಗ ಕಡ್ಡಾಯವಾಗಿ ದೂರವಾಣಿ ಸಂಖ್ಯೆಗಳನ್ನು ಪಡೆದುಕೊಳ್ಳುತ್ತಾರೆ. ಅವನ್ನು ಅವರು ಕಾಲ್ ಸೆಂಟರ್‌ಗಳಿಗೆ ನೀಡುತ್ತಿದ್ದಾರೆ. ಈ ಮಾಹಿತಿ ಸೈಬರ್ ಕಳ್ಳರ ಪಾಲಾಗುತ್ತಿರುವುದರಿಂದ ಅನೇಕರು ಲಕ್ಷಗಟ್ಟಲೆ ಹಣ ಕಳೆದುಕೊಳ್ಳುತ್ತಿದ್ದಾರೆ. ವೈಯಕ್ತಿಕ ಮಾಹಿತಿಗಳು ಮಾರುಕಟ್ಟೆಯಲ್ಲಿ ಸರಕಿನಂತೆ ಮಾರಾಟವಾಗುತ್ತಿರುವುದರಿಂದ ಗ್ರಾಹಕರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಆದರೆ ಕೊನೆಗೂ ಈಗ ಐಟಿ ಇಲಾಖೆ ಈ ಬಗ್ಗೆ ಗಂಭೀರವಾಗಿದೆ.