ಶ್ರೀನಗರ:ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿರುವ ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯವು ವಿಶ್ವದ ಟಾಪ್ ಶೇಕಡಾ ಎರಡು ವಿಜ್ಞಾನಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಮೆರಿಕದ ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯ ಹೊರತಂದಿರುವ ವಿಶ್ವದ ಟಾಪ್ ಶೇ. 02 ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯ ಡಾ. ಬಿ.ಜೆ. ಗಿರೀಶ್ ಮತ್ತು ಡಾ. ಬಿ.ಇ. ಕುಮಾರಸ್ವಾಮಿ ಅವರು ಮತ್ತೊಮ್ಮೆ ಸ್ಥಾನ ಪಡೆದಿದ್ದಾರೆ. ಇನ್ನೊಂದೆಡೆ, ಭಾರತದ ಉತ್ತರಾಖಂಡ್ ರಾಜ್ಯದ ಮೂವರು ಪ್ರಾಧ್ಯಾಪಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದಿರುವುದು ವಿಶೇಷವಾಗಿದೆ.
ಎಲ್ಸೇವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಸ್ಟ್ಯಾನ್ಫೋರ್ಡ್ ವಿವಿಯ ಜೆರೋಯಿನ ಬಾಸ್, ಕೆವಿನ್ ಬೋಯಾಕ್ ಮತ್ತು ಡಾ. ಜಾನ್ ಇವೊನ್ನಿಡಿಸ್ ಸಂಶೋಧನಾ ತಂಡವು ವಿಶ್ವದ ಅಗ್ರ ಶೇ. 2 ವಿಜ್ಞಾನಿಗಳ ಡೇಟಾಬೇಸ್ ಅನ್ನು ಅ. 10 ರಂದು ಬಿಡುಗಡೆ ಮಾಡಿದ್ದು ಅಂತರ್ಜಾಲದಲ್ಲಿ ಮುಕ್ತವಾಗಿ ಲಭ್ಯವಿದೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೈಗೊಂಡ ಸಂಶೋಧನಾ ಪ್ರಕಟಣೆಗಳು, ಸಂಶೋಧನಾ ಉಲ್ಲೇಖಗಳು, ಸಹಲೇಖನಗಳು, ಹೆಚ್ - ಇಂಡೆಕ್ಸ್ ಸೇರಿದಂತೆ ಹಲವು ಸಂಯೋಜಿತ ಮಾನದಂಡಗಳನ್ನು ಬಳಸಿ ಜಾಗತಿಕ ಅತ್ಯುತ್ತಮ ಒಂದು ಲಕ್ಷ ವಿಜ್ಞಾನಿಗಳನ್ನು ಗುರುತಿಸಿ ದತ್ತಾಂಶವೊಂದನ್ನು ಪ್ರಕಟಿಸಿದ್ದಾರೆ.
ಭಾರತದ ಉತ್ತರಾಖಂಡ್ ರಾಜ್ಯದ ಮೂವರು ಪ್ರಾಧ್ಯಾಪಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದಿರುವುದು ವಿಶೇಷವಾಗಿದೆ. ಹೇಮಾವತಿ ನಂದನ್ ಬಹುಗುಣ ಗರ್ವಾಲ್ ಸೆಂಟ್ರಲ್ ಯೂನಿವರ್ಸಿಟಿಯ ಮೂವರು ಶಿಕ್ಷಕರಾದ ಪ್ರೊಫೆಸರ್ ಆರ್‌ಕೆ ಮೈಖುರಿ, ಡಾ. ಅಜಯ್ ಸೆಮಾಲ್ಟಿ ಮತ್ತು ಪ್ರೊಫೆಸರ್ ರಾಮೋಲಾ ಅವರು ಉನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ವಿಶ್ವವಿದ್ಯಾನಿಲಯದ ಪರಿಸರ ವಿಭಾಗದ ಮುಖ್ಯಸ್ಥ ಪ್ರೊಫೆಸರ್ ಆರ್‌ಕೆ ಮೈಖುರಿ, ಫಾರ್ಮಸಿ ವಿಭಾಗದ ಡಾ. ಅಜಯ್ ಸೆಮಾಲ್ಟಿ ಮತ್ತು ಭೌತಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಆರ್‌ಸಿ ರಾಮೋಲಾ ಅವರು ವಿಶ್ವದ ಅಗ್ರ ಎರಡು ಶೇಕಡಾ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಅಕ್ಟೋಬರ್ 10 ರಂದು ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದ ಸಂಶೋಧಕರ ತಂಡವು ಈ ಪಟ್ಟಿ ಬಿಡುಗಡೆ ಮಾಡಿದೆ.
ಪ್ರೊಫೆಸರ್ ಆರ್‌ಕೆ ಮೈಖುರಿ ಮತ್ತು ಪ್ರೊಫೆಸರ್ ಆರ್‌ಸಿ ರಾಮೋಲಾ ಎರಡನೇ ಬಾರಿಗೆ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಡಾ. ಅಜಯ್ ಸೆಮಾಲ್ಟಿ ಮೂರನೇ ಬಾರಿಗೆ ಚಾರ್ಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಮೂವರನ್ನು ಅವರವರ ಕ್ಷೇತ್ರಗಳಲ್ಲಿ ಪರಿಣಿತರು ಎಂದು ಪರಿಗಣಿಸಲಾಗುತ್ತದೆ.
ಇದನ್ನೂ ಓದಿ: ಅಮೆರಿಕದಲ್ಲಿ ಸಿಂಗಲ್ ಡೋಸ್ ಇಂಟ್ರಾನಾಸಲ್ ಕೊರೊನಾ ಲಸಿಕೆ ಅಭಿವೃದ್ಧಿ