ಹೈದರಾಬಾದ್(ತೆಲಂಗಾಣ) : ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ '83' ಸಿನಿಮಾದ ಟೀಸರ್ ಅನ್ನು ಹಂಚಿಕೊಂಡಿದ್ದಾರೆ. ಕಬೀರ್ ಖಾನ್ ನಿರ್ದೇಶನದ ಬಹು ನಿರೀಕ್ಷಿತ ಕ್ರೀಡಾಧಾರಿತ ಚಿತ್ರ ಇದಾಗಿದೆ. ಚಿತ್ರದ ಟ್ರೈಲರ್ ನ.30ರಂದು ಬಿಡುಗಡೆಯಾಗಲಿದೆ ಎಂದು ನಟ ರಣವೀರ್ ಸಿಂಗ್ ಬಹಿರಂಗಪಡಿಸಿದ್ದಾರೆ.
ಜೂನ್ 25, 1983, ಲಂಡನ್‌ನ ಲಾರ್ಡ್ಸ್ ಕ್ರಿಕೆಟ್ ಸ್ಟೇಡಿಯಂನ ದೃಶ್ಯವಿರುವ ಟೀಸರ್‌ನ ಕೊನೆಯಲ್ಲಿ ಕಪಿಲ್ ದೇವ್ ಪಾತ್ರವನ್ನು ನಿಭಾಯಿಸುತ್ತಿರುವ ರಣವೀರ್ ಸಿಂಗ್ ಕ್ಯಾಚ್ ಹಿಡಿಯುತ್ತಿರುವುದು ಇದೆ.
ಕಪಿಲ್ ದೇವ್ ಹಿಡಿದ ಕ್ಯಾಚ್‌ನಿಂದ ವೆಸ್ಟ್ ಇಂಡೀಸ್‌ನ ವಿವಿಯನ್ ರಿಚರ್ಡ್ಸ್ ಅವರು ಔಟಾದರು. ಇದರಿಂದ ಭಾರತ 1983ರ ಕ್ರಿಕೆಟ್ ವಿಶ್ವಕಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳುವ ಹಾದಿ ಸುಗಮವಾಗಿತ್ತು.
83 ಸಿನಿಮಾ ಕಪಿಲ್ ದೇವ್ ನೇತೃತ್ವದ ಭಾರತ ಕ್ರಿಕೆಟ್ ತಂಡವು 1983ರ ವಿಶ್ವಕಪ್ ಗೆದ್ದ ಐತಿಹಾಸಿಕ ದಿನದ ಕತೆ ಒಳಗೊಂಡಿದೆ. ರಣವೀರ್ ಸಿಂಗ್ ಅವರು ಕಪಿಲ್ ದೇವ್ ಪಾತ್ರದಲ್ಲಿ ಕಾಣಿಸಿದ್ದಾರೆ.