ಮುಂಬೈ: ಕ್ಯಾನ್ಸರ್ನಿಂದ ಬಳಲುತ್ತಿದ್ದ ಬಾಲಿವುಡ್ನ ಜನಪ್ರಿಯ ನಟ ಇರ್ಫಾನ್ ಖಾನ್ ಕೊನೆಯುಸಿರೆಳೆದಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಮುಂಬೈನ ಕೋಕಿಲಾಬೆನ್ ಧೀರೂಬಾಯಿ ಅಂಬಾನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ತಮ್ಮ 53ನೇ ವಯಸ್ಸಿನಲ್ಲಿ ಸಾವನ್ನಪ್ಪಿದ್ದಾರೆ.
ಬಾಲಿವುಡ್ನ ಖ್ಯಾತ ನಟ ಇರ್ಫಾನ್ ಖಾನ್ ಇನ್ನಿಲ್ಲ - ನಟ ಇರ್ಫಾನ್ ಖಾನ್
ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ನಟ ಇರ್ಫಾನ್ ಖಾನ್ ಇಂದು ನಿಧನರಾಗಿದ್ದಾರೆ.
Actor Irrfan Khan
2 ವರ್ಷಗಳಿಂದ ನ್ಯೂರೋ ಎಂಡೋಕ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದ ಇರ್ಫಾನ್ ವಿದೇಶಕ್ಕೆ ತೆರಳಿ ಚಿಕಿತ್ಸೆ ಪಡೆದು ಬಂದಿದ್ದರು. ಕಳೆದ ಶನಿವಾರವಷ್ಟೇ ಇರ್ಫಾನ್ ಖಾನ್ ಅವರ ತಾಯಿ ಸಯೀದಾ ಬೇಗಂ ನಿಧನರಾಗಿದ್ದರು.
ಮುಂಬೈನಲ್ಲಿ ನೆಲೆಸಿದ್ದು ಲಾಕ್ಡೌನ್ ಕಾರಣ ರಾಜಸ್ಥಾನದಲ್ಲಿರುವ ತಮ್ಮ ತಾಯಿಯ ಅಂತಿಮ ದರ್ಶನ ಪಡೆಯಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ವಿಡಿಯೋ ಕಾಲ್ ಮೂಲಕವೇ ಅಮ್ಮನ ಅಂತಿಮ ದರ್ಶನ ಪಡೆದಿದ್ದರು.
Last Updated : Apr 29, 2020, 12:59 PM IST