ನವದೆಹಲಿ:ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಯಾವುದೇ ರೀತಿಯ ವಿಷ ಸೇವಿಸಿ ಮೃತಪಟ್ಟಿಲ್ಲ ಎಂದು ಮುಂಬೈನ ಕಲಿನಾ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ತಿಳಿಸಿದೆ. ಆದರೆ ಏಮ್ಸ್‌ನ ವಿಧಿ ವಿಜ್ಞಾನ ವೈದ್ಯಕೀಯ ಮಂಡಳಿ ಈ ಸಂಬಂಧ ತಾರ್ಕಿಕ ತೀರ್ಮಾನ ತೆಗೆದುಕೊಳ್ಳಲು ಕೆಲವು ಕಾನೂನು ಅಂಶಗಳನ್ನು ಪರಿಶೀಲಿಸುವ ಅವಶ್ಯಕತೆಯಿದೆ ಎಂದು ಹೇಳಿದೆ.
ಸುಶಾಂತ್ ಡೆತ್ ಕೇಸ್: ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಗ್ಗೆ ಏಮ್ಸ್ ಏನು ಹೇಳುತ್ತೆ? - ಏಮ್ಸ್‌ನ ವಿಧಿವಿಜ್ಞಾನ ವೈದ್ಯಕೀಯ ಮಂಡಳಿ
ಏಮ್ಸ್ ಮತ್ತು ಸಿಬಿಐ, ಸುಶಾಂತ್ ಸಾವಿನ ಪ್ರಕರಣದಲ್ಲಿ ಒಪ್ಪಂದ ಮಾಡಿಕೊಂಡಿವೆ. ಇದರ ಆಧಾರದ ಮೇಲೆ ತಾರ್ಕಿಕ ತೀರ್ಮಾನ ತೆಗೆದುಕೊಳ್ಳಲು ಇನ್ನೂ ಕೆಲವು ಕಾನೂನು ಅಂಶಗಳನ್ನು ಪರಿಶೀಲಿಸುವ ಅವಶ್ಯಕತೆಯಿದೆ ಎಂದು ಏಮ್ಸ್‌ನ ವಿಧಿ ವಿಜ್ಞಾನ ವೈದ್ಯಕೀಯ ಮಂಡಳಿಯ ಅಧ್ಯಕ್ಷ ಡಾ. ಸುಧೀರ್ ಗುಪ್ತಾ ತಿಳಿಸಿದ್ದಾರೆ.

ಸುಶಾಂತ್ ಸಾವು ಆತ್ಮಹತ್ಯೆಯಲ್ಲ, ಕೊಲೆ ಎಂಬ ದೂರಿನಡಿ ನಟನ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು. ಸಾವಿಗೂ ಮುನ್ನ ಸುಶಾಂತ್ಗೆ ವಿಷಪ್ರಾಶನ ಮಾಡಿದ್ದು, ಉದ್ದೇಶಪೂರ್ವಕವಾಗಿಯೇ ಮರಣೋತ್ತರ ಪರೀಕ್ಷೆ ವಿಳಂಬ ಮಾಡಲಾಗಿದೆ ಎಂಬ ಆರೋಪಗಳು ಕೇಳಿ ಬಂದಿದ್ದವು. ಹೀಗಾಗಿ ತನಿಖೆಗೆ ಸಹಾಯವಾಗಲೆಂದು ಸಿಬಿಐ ದೆಹಲಿಯ ಏಮ್ಸ್ ಆಸ್ಪತ್ರೆಯನ್ನು ಸಂಪರ್ಕಿಸಿತ್ತು. ಸುಶಾಂತ್ರ ಮರಣೋತ್ತರ ಪರೀಕ್ಷೆ ವರದಿಗಳನ್ನು ಮರುಪರಿಶೀಲಿಸಲು ವಿಧಿ ವಿಜ್ಞಾನ ತಜ್ಞರ ತಂಡವನ್ನು ಏಮ್ಸ್‌ನ ವೈದ್ಯಕೀಯ ಮಂಡಳಿ ರಚಿಸಿತ್ತು.
ಇದೀಗ ಮುಂಬೈನ ಕಲಿನಾ ವಿಧಿ ವಿಜ್ಞಾನ ಪ್ರಯೋಗಾಲಯವು ಸಾಯುವ ಮುನ್ನ ಸುಶಾಂತ್ಗೆ ವಿಷಪ್ರಾಶನವಾಗಿದೆ ಎಂಬ ಮಾಹಿತಿಯನ್ನು ತಳ್ಳಿಹಾಕಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಏಮ್ಸ್‌ನ ವಿಧಿ ವಿಜ್ಞಾನ ವೈದ್ಯಕೀಯ ಮಂಡಳಿಯ ಅಧ್ಯಕ್ಷ ಡಾ. ಸುಧೀರ್ ಗುಪ್ತಾ, "ಏಮ್ಸ್ ಮತ್ತು ಸಿಬಿಐ, ಸುಶಾಂತ್ ಸಾವಿನ ಪ್ರಕರಣದಲ್ಲಿ ಒಪ್ಪಂದ ಮಾಡಿಕೊಂಡಿವೆ. ಇದರ ಆಧಾರದ ಮೇಲೆ ತಾರ್ಕಿಕ ತೀರ್ಮಾನ ತೆಗೆದುಕೊಳ್ಳಲು ಇನ್ನೂ ಕೆಲವು ಕಾನೂನು ಅಂಶಗಳನ್ನು ಪರಿಶೀಲಿಸುವ ಅವಶ್ಯಕತೆಯಿದೆ" ಎಂದು ಹೇಳಿದ್ದಾರೆ.