ಬಾಲಿವುಡ್ ಬೆಡಗಿ ಆಲಿಯಾ ಭಟ್ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಈ ಬಗ್ಗೆ ಇಂದು ತಮ್ಮ ಅಧಿಕೃತ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಏಪ್ರಿಲ್ 2 ರಂದು ಆಲಿಯಾ ಕೊರೊನಾ ಟೆಸ್ಟ್ಗೆ ಒಳಗಾಗಿ ಪಾಸಿಟಿವ್ ವರದಿ ಪಡೆದಿದ್ದರು. ಅಂದಿನಿಂದ ಅವರು ಕ್ವಾರಂಟೈನ್ಗೆ ಒಳಗಾಗಿದ್ದರು. ನಟಿ ಅನಾರೋಗ್ಯಕ್ಕೆ ಒಳಗಾದಾಗ ಸಂಜಯ್ ಲೀಲಾ ಬನ್ಸಾಲಿ ಅವರ ‘ಗಂಗೂಬಾಯಿ ಕಥಿಯಾವಾಡಿ’ ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿದ್ದರು.