ಅಮಿತಾಬ್ ಬಚ್ಚನ್ ಮಗ ಅಭಿಷೇಕ್ ಬಚ್ಚನ್ಗೂ ಕರೊನಾ ವೈರಸ್ ತಗುಲಿರುವುದು ಕನ್ಫರ್ಮ್ ಆಗಿದ್ದು, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಅವರು ಟ್ವೀಟ್ ಮಾಡಿದ್ದಾರೆ.
ಇಂದು ಬೆಳಗ್ಗೆ ನನಗೆ ಹಾಗೂ ತಂದೆಗೆ ಕೊರೊನಾ ಇರುವುದು ದೃಢಪಟ್ಟಿದೆ. ಸೋಂಕಿನ ಲಕ್ಷಣ ಕಾಣಿಸಿಕೊಂಡಿರುವ ಕಾರಣ ಆಸ್ಪತ್ರೆಗೆ ದಾಖಲಾಗಿದ್ದೇವೆ. ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ನಮ್ಮ ಕುಟುಂಬ ಹಾಗೂ ಮನೆಯಲ್ಲಿರುವ ಸಿಬ್ಬಂದಿಗೆ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ ಎಂದು ಬರೆದುಕೊಂಡಿದ್ದಾರೆ.