ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರ ಬಂಗಲೆಯ ಸಿಬ್ಬಂದಿಯೊಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ಬಿಸಿಎಂ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರತೀಕ್ಷಾ ಮತ್ತು ಜಲ್ಸಾ ಬಂಗಲೆಯ 31 ಸಿಬ್ಬಂದಿಯಲ್ಲಿ ಒಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ತಿಳಿದು ಬಂದಿದೆ. ಸದ್ಯ ಸೋಂಕಿತ ನೌಕರನನ್ನು ಕೋವಿಡ್ ಕೇರ್ ಸೆಂಟರ್ನಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಅವರಿಗೆ ಯಾವುದೇ ಸೋಂಕಿನ ಲಕ್ಷಣಗಳಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಾರ್ಗಸೂಚಿಗಳ ಪ್ರಕಾರ ಸೋಂಕಿತರ ಸಂಪರ್ಕ ಪತ್ತೆ ಹಚ್ಚುವಿಕೆ, ಪರೀಕ್ಷೆ ಮತ್ತು ನಿಕಟ ಸಂಪರ್ಕಿತರನ್ನು ಹೋಮ್ ಕ್ವಾರಂಟೈನ್ ಮಾಡಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತಮ್ಮ ಬ್ಲಾಗ್ ಮೂಲಕ ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದ ಬಗ್ಗೆ ತಮ್ಮ ಅಭಿಮಾನಿಗಳಿಗೆ ನಿಯಮಿತವಾಗಿ ಅಪ್‌ಡೇಟ್ ಮಾಡುವ ಅಮಿತಾಬ್ ಬಚ್ಚನ್, ನಾವು ಮನೆಯಲ್ಲೇ ಕೋವಿಡ್ ಸನ್ನಿವೇಶಗಳನ್ನುದುರಿಸುತ್ತಿದ್ದೇವೆ ಎಂದು ನಿನ್ನೆ (ಮಂಗಳವಾರ) ಪೋಸ್ಟ್ ಮಾಡಿದ ಬ್ಲಾಗ್‍ನಲ್ಲಿ ಮಾಹಿತಿ ನೀಡಿದ್ದಾರೆ.
2020ರಲ್ಲಿ ಅಮಿತಾಭ್ ಬಚ್ಚನ್, ಅಭಿಷೇಕ್ ಬಚ್ಚನ್, ಸೊಸೆ ಐಶ್ವರ್ಯಾ ರೈ ಬಚ್ಚನ್ ಮತ್ತು ಅವರ ಮೊಮ್ಮಗಳು ಆರಾಧ್ಯ ಬಚ್ಚನ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಸೋಂಕಿನಿಂದ ಚೇತರಿಸಿಕೊಳ್ಳುವವರೆಗೂ ಕುಟುಂಬ ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿತ್ತು.
ಇದನ್ನೂ ಓದಿ:Radhe - Shyam: ಕೊರೊನಾ ಹಿನ್ನೆಲೆ ಸಿನಿಮಾ ರಿಲೀಸ್ ದಿನಾಂಕ ಮುಂದೂಡಿಕೆ