ಕರ್ನಾಟಕ

karnataka

ETV Bharat / sitara

'ನಮ್ಮ ಕುಟುಂಬದ ಆರೋಗ್ಯದ ಬಗ್ಗೆ ಪ್ರಾರ್ಥನೆ ಸಲ್ಲಿಸಿದ ನಿಮ್ಮೆಲ್ಲರಿಗೂ ಧನ್ಯವಾದ': ಬಿಗ್ ಬಿ ಟ್ವೀಟ್​ - ಪ್ರಾರ್ಥನೆ ಸಲ್ಲಿಸಿದ ನಿಮ್ಮೆಲ್ಲರಿಗೂ ಧನ್ಯವಾದ

ಅಮಿತಾಬ್​ ಬಚ್ಚನ್​, ಅಭಿಷೇಕ್​​, ಐಶ್ವರ್ಯ ರೈ ಹಾಗೂ ಮೊಮ್ಮಗಳು ಆರಾಧ್ಯಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಭಿಮಾನಿಗಳಿಗೆ ಬಿಗ್​ ಬಿ ಧನ್ಯವಾದ ತಿಳಿಸಿದ್ದಾರೆ.

ಬಿಗ್ ಬಿ ಟ್ವೀಟ್​
ಬಿಗ್ ಬಿ ಟ್ವೀಟ್​

By

Published : Jul 13, 2020, 9:32 AM IST

ಮುಂಬೈ:ಕೊರೊನಾ ವೈರಸ್​​ನಿಂದ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ ಹಾಗೂ ಪ್ರಾರ್ಥನೆ ಸಲ್ಲಿಸಿದ ಎಲ್ಲ ಅಭಿಮಾನಿಗಳು ಹಾಗೂ ಹಿತೈಷಿಗಳಿಗೆ ಕುಟುಂಬದ ಪರವಾಗಿ ಬಾಲಿವುಡ್​ ಹಿರಿಯ ನಟ ಅಮಿತಾಬ್​ ಬಚ್ಚನ್​​​​​​ ಕೃತಜ್ಞತೆ ಸಲ್ಲಿಸಿ ಟ್ವೀಟ್​ ಮಾಡಿದ್ದಾರೆ.

ಅಮಿತಾಬ್​ ಬಚ್ಚನ್​, ಅಭಿಷೇಕ್​​, ಐಶ್ವರ್ಯ ರೈ ಹಾಗೂ ಮೊಮ್ಮಗಳು ಆರಾಧ್ಯಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. ಈ ಸಂಬಂಧ ಎರಡು ಟ್ವೀಟ್​ ಮಾಡಿರುವ ಬಿಗ್​ ಬಿ, "ತಮ್ಮ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದವರಿಗೆ ಹಾಗೂ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ ಮತ್ತು ಪ್ರಾರ್ಥಿಸಿದ ಎಲ್ಲರಿಗೂ ಅಭಿಷೇಕ್, ಐಶ್ವರ್ಯ, ಆರಾಧ್ಯ ಮತ್ತು ನನ್ನ ಧನ್ಯವಾದಗಳು. ನಾನು ನನ್ನ ಕೈಗಳನ್ನು ಒಟ್ಟಿಗೆ ಸೇರಿಸಿ ಹೇಳುತ್ತಿದ್ದೇನೆ. ನಿಮ್ಮ ಶಾಶ್ವತ ಪ್ರೀತಿ ಮತ್ತು ವಾತ್ಸಲ್ಯಕ್ಕೆ ವಂದನೆಗಳು’’ ಎಂದು ಬರೆದುಕೊಂಡಿದ್ದಾರೆ.

ಬಿಗ್ ಬಿ ಮತ್ತು ಅವರ ಪುತ್ರ ಅಭಿಷೇಕ್ ಬಚ್ಚನ್ ಅವರನ್ನ ಶನಿವಾರ ರಾತ್ರಿ ಕೋವಿಡ್​​ -19 ಪರೀಕ್ಷೆ ನಡೆಸಿ ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಚ್ಚನ್ ಕುಟುಂಬದ ಎಲ್ಲಾ ಸದಸ್ಯರು ಹಾಗೂ ಅವರ ನಿವಾಸದ ಸಿಬ್ಬಂದಿಗೆ ಕೊರೊನಾ ಟೆಸ್ಟ್​ ನಡೆಸಲಾಗಿದೆ. ಈ ವೇಳೆ ಐಶ್ವರ್ಯಾ ರೈ ಬಚ್ಚನ್ ಮತ್ತು ಆರಾಧ್ಯ ಬಚ್ಚನ್ ಅವರಿಗೂ ಕೋವಿಡ್​ ಪಾಸಿಟಿವ್​ ದೃಢಪಟ್ಟಿದೆ. ಆದರೆ, ಜಯಾ ಬಚ್ಚನ್ ವರದಿ ನೆಗೆಟಿವ್​ ಬಂದಿದೆ.

ABOUT THE AUTHOR

...view details