ಮುಂಬೈ:ದೀಪಿಕಾ ಪಡುಕೋಣೆ, ಸಿದ್ಧಾಂತ್ ಚತುರ್ವೇದಿ, ಅನನ್ಯಾ ಪಾಂಡೆ, ಧೈರ್ಯ ಕರ್ವಾ ಅಭಿನಯದ ಗೆಹ್ರೈಯಾನ್ ಚಿತ್ರ ಫೆಬ್ರವರಿ 11ರಂದು ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾಗಲಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡವೂ ಸಾಕಷ್ಟು ಪ್ರಚಾರದಲ್ಲಿ ತೊಡಗಿಕೊಂಡಿದೆ.
ಚಿತ್ರದ ಪ್ರಚಾರದಲ್ಲಿ ತೊಡಗಿರುವ ನಟಿ ಅನನ್ಯಾ ಪಾಂಡೆ ಮೊದಲಿನಿಂದಲೂ ತಮ್ಮ ನ್ಯೂ ಕಾಸ್ಟೂಮ್ನಿಂದ ಗಮನ ಸೆಳೆಯುತ್ತಿದ್ದಾರೆ. ಈ ಮೊದಲು ಟ್ರೆಂಡಿ ಬ್ರ್ಯಾಲೆಟ್ ಮತ್ತು ಫಾಕ್ಸ್ ಲೆದರ್ ಪ್ಯಾಂಟ್ ಧರಿಸಿ ಫೋಟೋಶೂಟ್ ಮಾಡಿಸಿಕೊಂಡಿದ್ದ ಅನನ್ಯಾ ಪಾಂಡೆ ಇತ್ತೀಚೆಗೆ ಮುಂಬೈನಲ್ಲಿ ನಡೆದ ಸಿನಿಮಾ ಪ್ರಚಾರ ಕಾರ್ಯಕ್ರಮವೊಂದರಲ್ಲಿ ವಿಭಿನ್ನ ರೀತಿಯ ಉಡುಪು ಧರಿಸಿ, ಟ್ರೋಲ್ಗೆ ಗುರಿಯಾಗಿದ್ದಾರೆ.