ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಸುಶಾಂತ್ ಮಾಜಿ ಪ್ರೇಯಸಿ ಅಂಕಿತಾ ಲೋಖಂಡೆ ಹಾಗೂ ಸ್ನೇಹಿತೆ ಕೃತಿ ಸನನ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ತಮ್ಮ ಇನ್ಸ್ಟಾಗ್ರಾಮ್ನಲ್ಲಿ ವಿಡಿಯೋ ಸಂದೇಶವೊಂದನ್ನು ಹಂಚಿಕೊಂಡಿರುವ ಅಂಕಿತಾ ಲೋಖಂಡೆ, ಕೈಯಲ್ಲಿ Justice for Sushant #CBI for SSR ಎಂದು ಬರೆದಿರುವ ಪೇಪರ್ ಹಿಡಿದು ಸುಶಾಂತ್ ಏಕೆ ಆ ನಿರ್ಧಾರ ಕೈಗೊಂಡರು, ಅವರ ಆತ್ಮಹತ್ಯೆ ಹಿಂದೆ ಯಾರ ಕೈವಾಡವಿದೆ ಎಂದು ಇಡೀ ದೇಶವೇ ತಿಳಿಯಲು ಬಯಸುತ್ತಿದೆ ಆದ್ದರಿಂದ ಸುಶಾಂತ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ಮನವಿ ಮಾಡಿದ್ದಾರೆ.
ಕೃತಿ ಸನನ್ ಇನ್ಸ್ಟಾಗ್ರಾಮ್ ಸ್ಟೋರಿ
ಮತ್ತೊಂದೆಡೆ ಕೃತಿ ಸನನ್ ಕೂಡಾ ತಮ್ಮ ಇನ್ಸ್ಟಾಗ್ರಾಮ್ ಸ್ಟೇಟಸ್ನಲ್ಲಿ ಯಾವುದೇ ರಾಜಕೀಯ ಒತ್ತಡಗಳಿಗೆ ಮಣಿಯದೆ ಈ ಪ್ರಕರಣವವನ್ನು ಸಿಬಿಐ ತನಿಖೆಗೆ ನೀಡಿ ಸುಶಾಂತ್ ಸಾವಿಗೆ ನ್ಯಾಯ ಒದಗಿಸಿಕೊಡಬೇಕೆಂದು ಮನವಿ ಮಾಡಿದ್ದಾರೆ. ಶೀಘ್ರವೇ ಸುಶಾಂತ್ ಸಾವಿಗೆ ನ್ಯಾಯ ದೊರೆಯಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಸುಶಾಂತ್ ಕುಟುಂಬ, ಸ್ನೇಹಿತರು, ಅಭಿಮಾನಿಗಳು ಹಾಗೂ ಆತನನ್ನು ಇಷ್ಟಪಡುವ ಎಲ್ಲರೂ ಇದನ್ನು ಬಯಸುತ್ತಿದ್ದಾರೆ ಎಂದು ಕೃತಿ ಸನನ್ ಮನವಿ ಮಾಡಿದ್ದಾರೆ.
ಇದಕ್ಕೂ ಮುನ್ನ ನಟಿ ಕಂಗನಾ ರಣಾವತ್ ಕೂಡಾ ಸುಶಾಂತ್ ಪ್ರಕರಣವನ್ನು ಸಿಬಿಐಗೆ ನೀಡಬೇಕೆಂದು ವಿಡಿಯೋ ಮೂಲಕ ಮನವಿ ಮಾಡಿದ್ದರು. ಮುಂಬೈನ ಬಾಂದ್ರಾ ಅಪಾರ್ಟ್ಮೆಂಟ್ನಲ್ಲಿ ಜೂನ್ 14 ರಂದು ಸುಶಾಂತ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.